ಬೇಸಿಗೆಯಲ್ಲಿ ಸೇವಿಸಬೇಕಾದ ಐದು ಹಣ್ಣುಗಳು ಯಾವುದು ಗೊತ್ತಾ ? ಇಲ್ಲಿದೆ ಮಾಹಿತಿ
Fruits : ಬೇಸಿಗೆಯ ಉರಿಬಿಸಿಲು ಹೆಚ್ಚಾಗುತ್ತಿದ್ದಂತೆ ಬಾಯಾರಿಕೆ, ಆಯಾಸ ಹೆಚ್ಚಾಗುವುದು ಸಹಜ. ಬೇಸಿಗೆ(summer)ಯಲ್ಲಿ ಹೆಚ್ಚಿನವರು ಎದುರಿಸುವ ಸಮಸ್ಯೆ ಎಂದರೆ ದೇಹದಲ್ಲಿ ನಿರ್ಜಲೀಕರಣ. ಹೆಚ್ಚು ನೀರು ಕುಡಿಯುವುದರ ಜೊತೆ ಈ ಸಮಯದಲ್ಲಿ ದೇಹವನ್ನು ತಂಪಾಗಿಸಲು ಹಣ್ಣುಗಳು (Fruits), ಹಣ್ಣಿನ ರಸಗಳು ಸೇವಿಸೋದು ಒಳ್ಳೆಯದು. ಅದರಲ್ಲೂ ಬೇಸಿಗೆಗೆ ಸೂಕ್ತವಾದ ಹಣ್ಣುಗಳ್ಯಾವುವು ಅನ್ನೋದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ..
ಮಾವು
ಈ ಪಟ್ಟಿಯಲ್ಲಿ ಮಾವು ಮೊದಲು ಸೇರ್ಪಡೆಗೊಂಡಿದ್ದು. ಮಾವಿನ ಹಣ್ಣಿನಲ್ಲಿ ವಿಟಮಿನ್ ಎ, ಬಿ6, ಸಿ ಮತ್ತು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಇತ್ಯಾದಿಗಳಿದ್ದು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರಲ್ಲೂ ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನುವುದು ಜೀರ್ಣಕ್ರಿಯೆಗೂ ಒಳ್ಳೆಯದು.
ಕಲ್ಲಂಗಡಿ
ಕಲ್ಲಂಗಡಿ ಬೇಸಿಗೆಯಲ್ಲಿ ಬಾಯಾರಿಕೆಯನ್ನು ನೀಗಿಸುತ್ತದೆ, ದೇಹವನ್ನು ಪೋಷಿಸುತ್ತದೆ ಮತ್ತು ಮನಸ್ಸನ್ನು ಉಲ್ಲಾಸಗೊಳಿಸುತ್ತದೆ. ಕಲ್ಲಂಗಡಿ 95% ವರೆಗೆ ನೀರಿನ ಅಂಶವನ್ನು ಹೊಂದಿರುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನುವುದು ತುಂಬಾ ಒಳ್ಳೆಯದು. ಇದರಲ್ಲಿ ಸಾಕಷ್ಟು ನೀರು ಇರುವುದರಿಂದ ದೇಹಕ್ಕೆ ತುಂಬಾ ಪ್ರಯೋಜನಕಾರಿ. ದೇಹವನ್ನು ಹೈಡ್ರೇಟ್ ಮಾಡುವುದರ ಜೊತೆಗೆ, ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಹೃದಯದ ಸರಿಯಾದ ಕಾರ್ಯನಿರ್ವಹಣೆಗೆ ಇವು ಸಹಾಯ ಮಾಡುತ್ತವೆ.
ಸ್ಟ್ರಾಬೆರಿಗಳು
ಬೇಸಿಗೆಯ ಬಿಸಿಲಿನ ತಾಪಕ್ಕೆ ರೋಗ ನಿರೋಧಕಗಳು, ಜೀವಸತ್ವಗಳು ಮತ್ತು ಇತರ ಖನಿಜಗಳಿಂದ ಸಮೃದ್ಧವಾಗಿರುವ ಸ್ಟ್ರಾಬೆರಿಗಳು ಬೇಸಿಗೆಯಲ್ಲಿ ತಿನ್ನಲೇಬೇಕಾದ ಹಣ್ಣುಗಳಾಗಿವೆ.
ಆರೆಂಜ್
ಕಿತ್ತಳೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು. ಇವು ಉತ್ತಮ ಜೀರ್ಣಕ್ರಿಯೆಯ ಆರೋಗ್ಯವನ್ನೂ ನೀಡುತ್ತವೆ.
ಪಪ್ಪಾಯಿ
ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ, ಎ ಮತ್ತು ಬಿ ಯಲ್ಲಿ ಸಮೃದ್ಧವಾಗಿದೆ. ಅಷ್ಟೇ ಅಲ್ಲದೇ 91-92% ನೀರಿನ ಅಂಶವಿದೆ. ಪಪ್ಪಾಯಿಯಲ್ಲಿ ಖನಿಜಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ. ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು, ಮಲಬದ್ಧತೆ ತಡೆಗಟ್ಟಲು, ಹೃದಯದ ಆರೋಗ್ಯ, ರೋಗನಿರೋಧಕ ಶಕ್ತಿ ಮತ್ತು ಚರ್ಮದ ರಕ್ಷಣೆಗೆ ಪಪ್ಪಾಯಿ ಒಳ್ಳೆಯದು.