Ration Card Latest Updates : ಪಡಿತರ ವಿತರಣೆಯಲ್ಲಿ ಬದಲಾವಣೆ ತಂದ ಸರ್ಕಾರ!

Ration Card Latest Rules: ಈಗಾಗಲೇ ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಸುಧಾರಿಸುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುವವರಿಗೆ ಪ್ರಸ್ತುತ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊದನ್ನು (information ) ನೀಡಿದೆ.

ಇದೀಗ ಪಡಿತರ ವಿತರಣೆಯ ನಿಯಮವನ್ನು (Ration Card Latest Rules) ಮೋದಿ ಸರ್ಕಾರ (government ) ಬದಲಾಯಿಸಿದ್ದು, ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟಲು ಕೇಂದ್ರ ಸರ್ಕಾರವು ದೇಶಾದ್ಯಂತ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತ ಅಕ್ಕಿಯನ್ನು ನೀಡಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಎಲ್ಲಾ ರಾಜ್ಯಗಳ ಪಡಿತರ ವಿತರಣಾ ಕೇಂದ್ರಗಳಿಗೆ ಸಾರವರ್ಧಿತ ಅಕ್ಕಿಯನ್ನು ಸರಬರಾಜು ಮಾಡಲಾಗುತ್ತಿದೆ.

ಮುಖ್ಯವಾಗಿ ಸಾರವರ್ಧಿತ ಅಕ್ಕಿಯನ್ನು ಸೇವಿಸುವ ಮೂಲಕ ವ್ಯಕ್ತಿಯು ಕಬ್ಬಿಣ, ಫೋಲಿಕ್ ಆಮ್ಲ ಮತ್ತು ವಿಟಮಿನ್ ಬಿ 12 ಅನ್ನು ಸಾಕಷ್ಟು ಪಡೆಯಲು ಸಾಧ್ಯವಾಗುತ್ತದೆ. ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಈ ಅಕ್ಕಿಯು ಸಾಮಾನ್ಯ ಅಕ್ಕಿಯಂತೆಯೇ ರುಚಿಯನ್ನು ಹೊಂದಿರುತ್ತದೆ. ಈ ಅಕ್ಕಿಯಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿಯಮ ಜಾರಿಗೆ ತಂದಿದೆ ಎಂದು ತಿಳಿಸಲಾಗಿದೆ.

ಸದ್ಯ ಮೋದಿ ಸರ್ಕಾರದ ಆಹಾರ ಭದ್ರತಾ ಯೋಜನೆಯಡಿ ಡಿಸೆಂಬರ್ 2023 ರವರೆಗೆ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತ ಗೋಧಿ ಮತ್ತು ಅಕ್ಕಿ ನೀಡುವ ಯೋಜನೆ ಇದ್ದು, ಇದರ ಅಡಿಯಲ್ಲಿ ಅರ್ಹ ಕುಟುಂಬಕ್ಕೆ ಪ್ರತಿ ತಿಂಗಳು ಮೂರು ಕೆಜಿ ಅಕ್ಕಿ ಮತ್ತು ಎರಡು ಕೆಜಿ ಗೋಧಿಯನ್ನು ವಿತರಿಸಲಾಗುತ್ತಿದೆ.

ಜೊತೆಗೆ ಅಂತ್ಯೋದಯ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಪಡಿತರ ಚೀಟಿಯಲ್ಲಿ 21 ಕೆಜಿ ಅಕ್ಕಿ ಮತ್ತು 14 ಕೆಜಿ ಗೋಧಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

Leave A Reply

Your email address will not be published.