Summer Rain : ರಾಜ್ಯದ ಈ ಭಾಗಗಳಲ್ಲಿ ವರುಣಾರ್ಭಟ ಮುಂದಿನ ಐದು ದಿನಗಳಲ್ಲಿ!

Summer Rain: ಇತ್ತೀಚಿನ ಅಕಾಲಿಕ ಮಳೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಅದಲ್ಲದೆ ಈಗಾಗಲೇ ಬಿಸಿಲ ಬೇಗೆ ತಡೆಯಲಾಗದೆ ಜನರು ಹಲವಾರು ಸಮಸ್ಯೆಗಳನ್ನು (problem) ಅನುಭವಿಸುತ್ತಿದ್ದಾರೆ. ಸದ್ಯ ಬಿಸಿಲ ಧಗೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ರಾಜ್ಯಕ್ಕೆ ಬೇಸಿಗೆ ಮಳೆ (Summer Rain) ಬೀಳಲಿದೆ ಎಂಬ ಮಾಹಿತಿ ಇದೆ. ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಮಾಹಿತಿ ತಿಳಿದು ಬಂದಿದೆ.

ಸದ್ಯ ರಾಜಧಾನಿ ಬೆಂಗಳೂರಿನಲ್ಲಿ (bengaluru ) ಗರಿಷ್ಠ 32 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮಧ್ಯಾಹ್ನದ ನಂತರ ಕೆಲ ಭಾಗಗಳಲ್ಲಿ ಮೋಡ ಕವಿದ ವಾರತಾವರಣ ಇರಲಿದ್ದು, ಸುಳಿಗಾಳಿ ಬೀಸಲಿದೆ.

ರಾಜ್ಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅದಲ್ಲದೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಜೊತೆಗೆ ಮಧ್ಯ ಪ್ರದೇಶ, ಬಿಹಾರ, ರಾಜಸ್ಥಾನದಲ್ಲಿಯೂ ಮಳೆಯಾಗುತ್ತಿದೆ.

ಒಟ್ಟಿನಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಜೊತೆಗೆ ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕದ ಭಾಗದಲ್ಲಿ ಹಂತ ಹಂತವಾಗಿ ಬಿಸಿಲು ಏರಿಕೆಯಾಗುತ್ತಿರುವ ಮಾಹಿತಿಯನ್ನು ಹವಾಮಾನ ಇಲಾಖೆ ತಿಳಿಸಿದೆ.

Leave A Reply

Your email address will not be published.