Tirupati temple Assets : ತಿರುಪತಿ ದೇವಾಲಯದ ಒಟ್ಟು ಆಸ್ತಿ ಎಷ್ಟು? ಚಿನ್ನ ಎಷ್ಟಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ

tirupati temple assets: ತಿರುಪತಿ ತಿಮ್ಮಪ್ಪನ ದೇವಾಲಯವು (tirupati timmappa temple) ಅತ್ಯಂತ ಜನಪ್ರಿಯ ದೇವಾಲಯವಾಗಿದೆ. ಈ ದೇವಾಲಯಕ್ಕೆ ಎಣಿಕೆಗೂ ಮೀರಿದ ಭಕ್ತರು ಭೇಟಿ ನೀಡುತ್ತಾರೆ. ಈ ದೇವಾಲಯ ಹೆಚ್ಚಿನ ಪ್ರಮಾಣದ ದಾನಗಳನ್ನು ಪಡೆದುಕೊಳ್ಳುವ ದೇವಾಲಯಗಳಲ್ಲಿ ಒಂದಾಗಿದೆ. ಭಕ್ತರು ತಮ್ಮೆಲ್ಲಾ ಇಚ್ಛೆಯನ್ನು ಈಡೇರಿಸುವಂತೆ ಭಗವಂತನಲ್ಲಿ ಬೇಡಿಕೊಳ್ಳುತ್ತಾರೆ. ಮತ್ತು ಇಚ್ಛೆ ಫಲಿಸಿದ ನಂತರ ದೇವಾಲಯದ (tirupati temple) ಹುಂಡಿಯಲ್ಲಿ ತಮ್ಮ ದಾನವನ್ನು ನೀಡುವುದು ವಾಡಿಕೆ. ಈ ರೀತಿಯಾಗಿ ಲಕ್ಷಾಂತರ ಭಕ್ತರು ತಮ್ಮ ದಾನವನ್ನು ನೀಡಲು ಇಲ್ಲಿನ ದೇವಾಲಯಕ್ಕೆ ಆಗಮಿಸುತ್ತಾರೆ.

ಅಲ್ಲದೆ, ಈ ದೇವಾಲಯ ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ (world’s richest temple) ಒಂದಾಗಿದೆ. ನಿಮಗೆ ಗೊತ್ತಾ? ಅತ್ಯಂತ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು (tirupati temple assets) ? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು ಎಂಬುದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ತಿರುಪತಿ ತಿಮ್ಮಪ್ಪನ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು ಘೋಷಿಸಿದೆ. ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ. ದೇವಸ್ಥಾನದ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ 15,938 ಕೋಟಿ ರೂ. ಠೇವಣಿ ಇದೆ. ತಿರುಪತಿ ತಿರುಮಲದಲ್ಲಿರುವ ಆಸ್ತಿಯ ಒಟ್ಟು ಮೌಲ್ಯ 5 ಸಾವಿರ ಕೋಟಿ ರೂ, ಇದ್ದು, ವೆಂಕಟೇಶ್ವರ ಸ್ವಾಮಿಯ ಚಿನ್ನದ ದಾಸ್ತಾನು 10.25 ಟನ್ ಇದೆ ಎನ್ನಲಾಗಿದೆ.

ಈ ಬಗ್ಗೆ ಟ್ರಸ್ಟ್ ಮಾಹಿತಿ ಹಂಚಿಕೊಂಡಿದ್ದು, ದೇವಸ್ಥಾನದ ಹೆಸರಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ (National Bank) 2019ರಲ್ಲಿ 13,025 ಕೋಟಿ ರೂ. ನಿಶ್ಚಿತ ಠೇವಣಿ ಇಡಲಾಗಿತ್ತು. ಕೋವಿಡ್‌ ಬಳಿಕ ಈ ಠೇವಣಿ ಗಾತ್ರ 15,938 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ 3 ವರ್ಷಗಳಲ್ಲಿ ಒಟ್ಟು 2,900 ಕೋಟಿ ರು. ಠೇವಣಿ ಹೆಚ್ಚಳವಾಗಿದೆ. 2019ರಲ್ಲಿ ಟಿಟಿಡಿ 7.3 ಟನ್‌ ಚಿನ್ನ ಹೊಂದಿತ್ತು ಎಂದು ಹೇಳಲಾಗಿದೆ.

ಇದೀಗ 2.9 ಟನ್‌ ಚಿನ್ನ ಸೇರಿಕೊಂಡಿದೆ. ಹಾಗಾಗಿ ಇದೀಗ ಒಟ್ಟು ಚಿನ್ನದ ಠೇವಣಿ 10.25 ಟನ್‌ಗೆ ಏರಿದೆ. ದೇಶದ ವಿವಿಧ ಬ್ಯಾಂಕ್‌ಗಳಲ್ಲಿ ಟಿಟಿಡಿಯು 5,309 ಕೋಟಿ ರೂ. ಮೌಲ್ಯದ ಚಿನ್ನವನ್ನು ಠೇವಣಿ ಇಟ್ಟಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.