UPSC recruitment 2023 : ಕೇಂದ್ರ ಲೋಕಸೇವಾ ಆಯೋಗ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
UPSC recruitment 2023 : ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC recruitment 2023)45 ಜಂಟಿ ನಿರ್ದೇಶಕರು, ತಜ್ಞರು, ಅಧಿಕಾರಿಗಳು ಮತ್ತು ಡೆಪ್ಯುಟಿ ನಿರ್ದೇಶಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನನು ಪಾವತಿಸುವಂತಿಲ್ಲ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು