Election Karnataka : ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಕೋಲಾರದಿಂದ ಸಿದ್ದು ಸ್ಪರ್ಧಿಸೋದು ಬೇಡ, ಈ ಕ್ಷೇತ್ರದಿಂದ ಕಣಕ್ಕಿಳಿಯಲಿ ಎಂದ ರಾಹುಲ್ ಗಾಂಧಿ!

Election Karnataka : ನಿನ್ನೆ ದಿನ(ಮಾರ್ಚ್ 17) ಕರ್ನಾಟಕದ ವಿಧಾನಸಭೆ ಚುನಾವಣೆ(Karnataka Assembly Election)ನಿಮಿತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ಈ ವೇಳೆ ರಾಹುಲ್ ಗಾಂಧಿ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಹೌದು, ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.

ಈ ಸಭೆಯಲ್ಲಿ ಎರಡು ಮಹತ್ವದ ನಿರ್ಧಾರಗಳ ಕುರಿತು ಚರ್ಚೆಯಾಗಿದ್ದು, ಸಿದ್ದರಾಮಯ್ಯ(Siddaramaiah) ಸ್ಪರ್ಧಿಸೋ ಕ್ಷೇತ್ರ ಬದಲಾಗೋ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಈಗಾಗಲೇ ಕೋಲಾರದಿಂದ ಸ್ಪರ್ಧಿಸೋದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಅಲ್ಲಿ ಭರದಿಂದ ಪ್ರಚಾರ ಕೈಗೊಂಡಿದ್ದಾರೆ. ಅಲ್ಲಿಯೇ ಮನೆಯನ್ನು ಖರೀದಿಸಿದ್ದಾರೆ. ಆದರೆ ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇದರೊಂದಿಗೆ ಇತ್ತೀಚೆಗೆ ನಿಧನರಾದ ರಾಜ್ಯ ಕಾಂಗ್ರೆಸ್ಸಿನ ಕಾರ್ಯಧ್ಯಕ್ಷರಾದ ದೃವ ನಾರಾಯಣ್ ಅವರ ಪುತ್ರನಿಗೆ ಟಿಕೆಟ್ ನೀಡುವ ವಿಚಾರ ಕೂಡ ಚರ್ಚೆಗೆ ಬಂದಿದ್ದು, ನಂಜನಗೂಡು ಕ್ಷೇತ್ರದಿಂದ ದೃವ ನಾರಾಯಣ್ ಮಗನನ್ನೇ ಸ್ಪರ್ಧೆಗೆ ಇಳಿಸುವುದಾಗಿ ತೀರ್ಮಾನಿಸಲಾಯಿತು ಎನ್ನಲಾಗಿದೆ.

ಇನ್ನು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎಂದರು.

Leave A Reply

Your email address will not be published.