ಕಡಬ:ಕಾಡಾನೆ ಸೆರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಕೊಲೆಗೆ ಯತ್ನ ಪ್ರಕರಣ,ಬಂಧಿತ ಆರೋಪಿಗಳಿಗೆ ಜಾಮೀನು

Kadaba forrest officer case :ಪುತ್ತೂರು:ಕೆಲ ದಿನಗಳ ಹಿಂದೆ ಕಡಬ ರೆಂಜಿಲಾಡಿ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿತೆಗೆದುಕೊಂಡ ನಂತರದ ಬೆಳವಣಿಗೆಯಲ್ಲಿ ಸೆರೆ ಹಿಡಿಯಲಾದ ಕಾಡಾನೆಯೊಂದನ್ನು ಕೊಂಡೊಯ್ಯುವುದಕ್ಕೆ ಆಕ್ಷೇಪಿಸಿದ ನಾಗರಿಕರ ಗುಂಪೊಂದು ಎಲ್ಲ ಕಾಡಾನೆಗಳನ್ನೂ ಸೆರೆಹಿಡಿದು ಕೊಂಡೊಯ್ಯುವಂತೆ ಹೇಳಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಅರಣ್ಯ, ಪೊಲಿಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ ಅಧಿಕಾರಿಗಳ ಕರ್ತವ್ಯಕ್ಕೆ ( Kadaba forrest officer case) ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ್ದ ಆರೋಪದಲ್ಲಿ ಬಂಧಿತ ಏಳು ಮಂದಿಗೆ ಜಿಲ್ಲಾ ನ್ಯಾಯಾಲಯ ಶರ್ತಬದ್ಧ ಜಾಮೀನು ಮಂಜೂರು ಮಾಡಿದೆ.

ಉಮೇಶ್ ಕಮರ್‌ಕಜೆ, ರಾಜೇಶ್ ಕನಡ ಕಮರ್‌ಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕಮರ್‌ಕಜೆ, ತೀರ್ಥಕುಮಾರ ಕೋಲ್ಪೆ,ಗಂಗಾಧರ ಗೌಡ ಬಾರ್ಯ ಸಿರಿಬಾಗಿಲು ಮತ್ತು ಅಜಿತ್ ಕುಮಾರ್ ರೆಂಜಾಳ ಎಂಬವರನ್ನು ಕಡಬ ಪೊಲೀಸರು ಬಂಸಿದ್ದರು.ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ವಕೀಲ ಮಹೇಶ್ ಕಜೆ ಅವರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ರೆಂಜಿಲಾಡಿ ನೈಲದಲ್ಲಿ ಫೆ.20ರಂದು ಬೆಳ್ಳಂಬೆಳಗ್ಗೆ ಕಾಡಾನೆಯೊಂದು ದಾಳಿ ನಡೆಸಿ ಪೇರಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ರಂಜಿತಾ ರೈ ಮತ್ತು ನೈಲ ರಮೇಶ್ ರೈ ಎಂಬವರು ಮೃತಪಟ್ಟಿದ್ದರು.ಆನೆ ದಾಳಿ ನಡೆಸಿ ಅಮಾಯಕರಿಬ್ಬರನ್ನು ಬಲಿ ತೆಗೆದುಕೊಂಡ ನಂತರದ ಬೆಳವಣಿಗೆಯಲ್ಲಿ ಪರಿಸರದ ನಾಗರಿಕರು ಆತಂಕದಿಂದಲೇ ದಿನ ಕಳೆಯುವಂತಹ ಸ್ಥಿತಿ ನಿರ್ಮಾಣವಾಗಿತ್ತು.ವಿಚಾರ ವಿಧಾನಸಭಾ ಅಧಿವೇಶದನದಲ್ಲಿಯೂ ಪ್ರಸ್ತಾಪವಾಗಿತ್ತು.

ಈ ಭಾಗದಲ್ಲಿ ಕಳೆದ ಹಲವು ಸಮಯಗಳಿಂದ ಕಾಡಾನೆ ಉಪಟಳದಿಂದ ಜನ ನೆಮ್ಮದಿ ಕಳೆದುಕೊಂಡು ಆತಂಕದಿಂದಲೇ ಬದುಕುವಂತಹ ಸ್ಥಿತಿ ನಿರ್ಮಾಣವಾಗಿರುವುದರಿಂದ ಅರಣ್ಯ ಇಲಾಖೆ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಕಾಡಾನೆಗಳನ್ನು ಸೆರೆ ಹಿಡಿದು ಕೊಂಡೊಯ್ಯುವಂತೆ ಒಕ್ಕೊರಳ ಆಗ್ರಹ ವ್ಯಕ್ತಪಡಿಸಿದ್ದರು.ಕೊನೆಗೂ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭಗೊಂಡಿತ್ತಲ್ಲದೆ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

ಫೆ.23ರಂದು ರಾತ್ರಿ ಕೊಂಬಾರು ಗ್ರಾಮದ ಮಂಡಕರ ಸಮೀಪದ ಮೂಜೂರು ಅರಣ್ಯ ಪ್ರದೇಶದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು.ಅದೇ ದಿನ ರಾತ್ರಿ 9 ಗಂಟೆ ಸುಮಾರಿಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಕಾರ್ಯಾಚರಣಾ ತಂಡ ಮುಂದಾದಾಗ ನಾಗರಿಕರ ಗುಂಪೊಂದು ಕಾಡಾನೆಯಿದ್ದ ಲಾರಿಯನ್ನು ತಡೆಹಿಡಿದು ನಿಲ್ಲಿಸಿ, ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ ಇತರ ಕಾಡಾನೆಗಳನ್ನೂ ಸೆರೆ ಹಿಡಿದು ಒಟ್ಟಿಗೇ ಎಲ್ಲಾ ಆನೆಗಳನ್ನು ಕೊಂಡು ಹೋಗಬೇಕು ಎಂದು ಹೇಳಿ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದರು.

ಸೆರೆ ಹಿಡಿದ ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲವಾದ್ದರಿಂದ ನಾವು ಮೊದಲು ಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಆನೆಗಳನ್ನೂ ಸೆರೆಹಿಡಿಯವುದಾಗಿ ಅಧಿಕಾರಿಗಳು ಹೇಳಿದರೂ ಕೇಳದ ಕೆಲವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದರು.ಪೊಲೀಸ್ ಅಧಿಕಾರಿಗಳೂ ಬಂದು ವಿಷಯ ಮನವರಿಕೆ ಮಾಡಿದರೂ ಕೇಳದೆ ಕೆಲವರು ಕರ್ತವ್ಯದಲ್ಲಿದ್ದ ಪೊಲೀಸ್, ಅರಣ್ಯ ಇಲಾಖಾ ಸಿಬ್ಬಂದಿಗಳ ಮೇಲೆ ಕಲ್ಲುತೂರಾಟ ಮಾಡಿದ್ದರು.

ಇಲಾಖಾ ವಾಹನಗಳಿಗೂ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದರಲ್ಲದೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಕೊಲೆಗೆ ಯತ್ನಿಸಿದ್ದಾಗಿ ಉಪವಲಯ ಅರಣ್ಯಾಧಿಕಾರಿ ಮದನ್ ಬಿ.ಕೆ.ಅವರು ಕಡಬ ಪೊಲೀಸರಿಗೆ ದೂರು ನೀಡಿದ್ದರು.ಈ ದೂರಿನ ಮೇರೆಗೆ ಪೊಲೀಸರು

Beo:143,144,147,148,341,353,332,307,427,504,506 ಜೊತೆಗೆ149 ಐಪಿಸಿ ಮತ್ತು ಕಲಂ: 2(©),Karnataka Prevention of Distruction&loss Of Property Act- 1981ರಂತೆ ಪ್ರಕರಣ ದಾಖಲಿಸಿಕೊಂಡು 7 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಒಂದೆಡೆ ಕಾಡಾನೆಗಳ ನಿರಂತರ ದಾಳಿ, ಅಮಾಯಕರಿಬ್ಬರನ್ನು ಬಲಿ ತೆಗೆದುಕೊಂಡ ನಂತರದ ಬೆಳವಣಿಗೆಯಲ್ಲಿ ಈ ಭಾಗದಲ್ಲಿ ಓಡಾಡುವುದೇ ಕಷ್ಟ ಎನ್ನುವ ಆತಂಕದಲ್ಲಿ ನಾಗರಿಕರು ಇರುವ ನಡುವೆಯೇ ಪೊಲೀಸರು ಅಮಾಯಕರ ಮೇಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ಜೈಲಿಗಟ್ಟಿರುವುದು ನ್ಯಾಯ ಸಮ್ಮತವಾದ ವಿಚಾರ ಅಲ್ಲ ಆರೋಪಿಗಳ ಪರ ವಕೀಲ ಮಹೇಶ್ ಕಜೆ ಅವರು ನ್ಯಾಯಾಲಯದ ಗಮನ ಸೆಳೆದಿದ್ದರು.ಅವರ ವಾದವನ್ನು ಪುರಸ್ಕರಿಸಿದ, ಜಿಲ್ಲಾ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಪ್ರಭಾರವನ್ನೂ ಹೊಂದಿರುವ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಅವರು ಬಂಽತ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಮಾ.17ರಂದು ಆದೇಶಿಸಿದ್ದಾರೆ.

 

ಇದನ್ನೂ ಓದಿ  : Symphony cloud personal cooler :ಈ AC ಇದ್ರೆ ಸಾಕು, ಬೇಸಿಗೆ ಕಾಲ ಫುಲ್ ಆರಾಮ್ ಇರಬಹುದು! ರೇಟ್ ಕೂಡ ತುಂಬಾ ಚೀಪ್

Leave A Reply

Your email address will not be published.