KPSC ಗ್ರೂಪ್‌ ಸಿ ಹುದ್ದೆಗಳಿಗೆ ಅಧಿಸೂಚನೆ ! ಅರ್ಜಿ ಆಹ್ವಾನ

KPSC Group C job: ಕರ್ನಾಟಕ ಲೋಕಸೇವಾ ಆಯೋಗವು (KPSC)ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳಿಗೆ (KPSC Group C Job Notification 2023) ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಒಟ್ಟು 47 ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು (Candidates) ಕೊನೆಯ ದಿನದ (Last Date)ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
ಯಾವುದೇ ಹುದ್ದೆಯಾದರು ಅರ್ಜಿ ಸಲ್ಲಿಸುವ ಮುನ್ನ ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳು, ಹುದ್ದೆಗೆ ಬೇಕಾದ ಅರ್ಹತೆ, ವೇತನದ ಬಗ್ಗೆ ಮಾಹಿತಿ ಕಲೆ ಹಾಕುವುದು ಅವಶ್ಯಕ. ಈ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

 

ಹುದ್ದೆಯ ಇಲಾಖೆ ಹೆಸರು : ಸಹಕಾರ ಇಲಾಖೆ
ಹುದ್ದೆಯ ಪದನಾಮ : ಸಹಕಾರ ಸಂಘಗಳ ನಿರೀಕ್ಷಕರು
ನೇಮಕಾತಿ ಸಂಸ್ಥೆ – ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ಸಂಖ್ಯೆ: 47

ಉದ್ಯೋಗ ವಿಧ – Full Time
ಸ್ಥಳ – ಬೆಂಗಳೂರು

ಪ್ರಮುಖ ದಿನಾಂಕಗಳು
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 30-03-2023 ಆರಂಭಿಕ ದಿನವಾಗಿದೆ. 30-04-2023 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಲು 02-05-2023 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ : (Education Qualification)
ಆಸಕ್ತ ಅಭ್ಯರ್ಥಿಗಳು ಅಗ್ರಿಕಲ್ಚರಲ್ ಸೈನ್ಸ್‌, ಮಾರ್ಕೆಟಿಂಗ್ ಅಂಡ್ ಕೋಆಪರೇಷನ್, ಕಾಮರ್ಸ್‌ ಅಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಪದವಿ ಪಡೆದಿರಬೇಕು.

ವಯೋಮಿತಿ (Age Limit)
ಕನಿಷ್ಠ 18 ವರ್ಷ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯಾಗಿದ್ದು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷವಾಗಿದ್ದು,ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷವಾಗಿದೆ.

ಅಪ್ಲಿಕೇಶನ್‌ ಸಲ್ಲಿಸುವ ವಿಧಾನ ಹೀಗಿದೆ:
ಅಪ್ಲಿಕೇಶನ್ ಸಲ್ಲಿಕೆಗೆ ಮೂರು ಹಂತದಲ್ಲಿದ್ದು, ಮೊದಲಿಗೆ, ಪ್ರೊಫೈಲ್ ಕ್ರಿಯೇಟ್‌ / ಅಪ್‌ಡೇಟ್‌ ಮಾಡಬೇಕು. ಆ ನಂತರದ ಹಂತದಲ್ಲಿ ಅಪ್ಲಿಕೇಶನ್ ಸಬ್‌ಮಿಷನ್ ಮಾಡಬೇಕಾಗಿದ್ದು, ಕೊನೆಯ ಹಂತದಲ್ಲಿ ಅಪ್ಲಿಕೇಶನ್‌ ಶುಲ್ಕ ಪಾವತಿ ಮಾಡಬೇಕು.ಅರ್ಜಿ ಸಲ್ಲಿಕೆ ಪ್ರಕಟಣೆ ದಿನಾಂಕ- 18. 02. 23 ಆಗಿದ್ದು, 30. 04.23 ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ (Application Fee)
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600 ಆಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ ರೂ.300 ಆಗಿದೆ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50 ಆಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ ಶ್ರೇಣಿ : ರೂ.27,650-52,650

https://www.kpsc.kar.nic.in/index.html ನಲ್ಲಿ ಅಭ್ಯರ್ಥಿಗಳು ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30-04-2023 ಕೊನೆಯ ದಿನಾಂಕದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ಹುದ್ದೆಯ ಪರೀಕ್ಷೆಯ ಕುರಿತಂತೆ ಸದ್ಯದಲ್ಲೇ ಮಾಹಿತಿ ಪ್ರಕಟಿಸಲಾಗುತ್ತದೆ.

Leave A Reply

Your email address will not be published.