Mamata Banerjee: ರಾಹುಲ್ ಗಾಂಧಿ ಮೋದಿ ಹಾಗೂ ಬಿಜೆಪಿಯ ಅತಿದೊಡ್ಡ TRP : ತೀವ್ರ ಕುತೂಹಲಕ್ಕೆ ಕಾರಣವಾದ ಮಮತಾ ಬ್ಯಾನರ್ಜಿ ನಡೆ

Mamata Banerjee: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಯನ್ನು ಬಿಜೆಪಿ(BJP) ಹೀರೋ ಮಾಡಲು ಹೊರಟಿದೆ. ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಯವರೇ ದೊಡ್ಡ ಟಿಆರ್‌ಪಿ(TRP) ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಕಾಂಗ್ರೆಸ್​ ಹಾಗೂ ಬಿಜೆಪಿ ಎರಡೂ ಪಕ್ಷಗಳನ್ನು ದೂರುವ ಮೂಲಕ ಮುಂದಿನ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ಗೆ ಯಾರ ಸಾಥ್ ಬೇಕಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

 

ಕಳೆದ ಭಾರೀ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯನ್ನು ಮಣಿಸುವ ಸಲುವಾಗಿ, ಬಿಜೆಪಿ ವಿರೋಧಿಸುವ ಪಕ್ಷಗಳೆಲ್ಲಾ ಒಟ್ಟಾಗಿ ಮಹಾ ಘಟಬಂಧ(Maha Ghataband) ಮಾಡಿಕೊಂಡು ಚುನಾವಣಾ ಅಕಾಡಕ್ಕಿಳಿದಿದ್ದವು. ಆದರೆ ಇದರಿಂದ ಏನೇನೂ ಪ್ರಯೋಜನ ಆಗಿರಲಿಲ್ಲ. ಈ ಘಟಬಂಧದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಕೂಡ ಒಂದಾಗಿತ್ತು. ಇದಲ್ಲದೆ ಮಮತಾ ಅವರು ನಿರಂತರವಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಲೇ ಬಂದಿದ್ದರು. ಆದರೆ ಸದ್ಯ ಮಮತಾರವರು ಬಿಜೆಪಿಯೊಡನೆ ಕಾಂಗ್ರೆಸ್ ವಿರುದ್ಧವೂ ಹರಿಹಾಯ್ದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೌದು, ಪಶ್ಚಿಮ ಬಂಗಾಳದ(West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್​ ಹಾಗೂ ಬಿಜೆಪಿ ಎರಡೂ ಪಕ್ಷಗಳನ್ನು ದೂರುವ ಮೂಲಕ ಮುಂದಿನ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​ಗೆ ಯಾವುದೇ ಪಕ್ಷದ ಸಾಂಗತ್ಯ ಬೇಕಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಿಜೆಪಿ ಹೀರೋ ಮಾಡಲು ಹೊರಟಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.
ಲೋಕಸಭೆ ಚುನಾವಣೆಗೆ ಸುಮಾರು ಒಂದು ವರ್ಷ ಉಳಿದಿದ್ದು, ಈಗಾಗಲೇ ರಾಜಕೀಯ ವಾಕ್ಸಮರ ಆರಂಭವಾಗಿದೆ. ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವಿನ ಅಂತರವು ಕಡಿಮೆಯಾಗುವ ಬದಲು ಹೆಚ್ಚುತ್ತಿದೆ.

ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೇ, ಯಾರೂ ಪ್ರಧಾನಿ ಮೋದಿಯನ್ನು ಟೀಕಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಬಿಜೆಪಿಯು (BJP) ರಾಹುಲ್ ಗಾಂಧಿ (Rahul Gandhi) ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಬಯಸುತ್ತದೆ. ಅವರನ್ನು ತನ್ನ TRP ಮಾಡಿಕೊಂಡು ಹಿರೋ ಮಾಡಲು ಹೊರಟಿದೆ. ರಾಹುಲ್ ಗಾಂಧಿಯ ವಿಷಯವನ್ನೇ ಮುಂದಿಟ್ಟುಕೊಂಡು ಬಿಜೆಪಿ ಸಂಸತ್ತಿನ ಕಾರ್ಯನಿರ್ವಹಣೆಗೆ ಅವಕಾಶ ನೀಡುತ್ತಿಲ್ಲ. ಸಂಸತ್ತಿನಲ್ಲಿ ಅದಾನಿ ಹಾಗೂ ಎಲ್‍ಐಸಿ ವಿಷಯದ ಬಗ್ಗೆ ಚರ್ಚೆ ನಡೆಯಬೇಕು, ಈ ಕುರಿತ ಚರ್ಚೆಗಳು ನಡೆಯುತ್ತಿಲ್ಲ. ಗ್ಯಾಸ್ ಬೆಲೆಯ ಬಗ್ಗೆಯೂ ಚರ್ಚೆಯಾಗುತ್ತಿಲ್ಲ, ಇದೆಲ್ಲದರ ನಡುವೆ ಏಕರೂಪ ನಾಗರಿಕ ಸಂಹಿತೆ ಪ್ರತಿಯನ್ನು ಜಾರಿಗೆ ತರಲಾಗಿದೆ. ನಾವು ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪುವುದಿಲ್ಲ, ಅದನ್ನು ಜಾರಿಗೆ ತರಲು ನಾವು ಅನುಮತಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇದರೊಂದಿಗೆ ಬಿಜೆಪಿಯ ಮುಂದೆ ಕಾಂಗ್ರೆಸ್ (Congress) ತಲೆಬಾಗುತ್ತಿದೆ. ಕಾಂಗ್ರೆಸ್ ಸಿಪಿಎಂ ಹಾಗೂ ಬಿಜೆಪಿಯು ಅಲ್ಪಸಂಖ್ಯಾತರನ್ನು ತೃಣಮೂಲ ಕಾಂಗ್ರೆಸ್‍ನ ವಿರುದ್ಧ ಪ್ರಚೋದಿಸುತ್ತಿದೆ ಎಂದು ಆರೋಪಿಸಿದ್ದಾರೆ.

Leave A Reply

Your email address will not be published.