Amit shah: ಮಾ. 24, 26 ರಂದು ರಾಜ್ಯಕ್ಕೆ ಮತ್ತೆ ಅಮಿತ್​ ಶಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Amit shah: ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳ ಚುನಾವಣೆ ಭರಾಟೆ ರಂಗೇರುತ್ತಿದೆ. ಇದೀಗ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ.ಹಾಗಾಗಿ ಆಗಾಗ ರಾಜ್ಯಕ್ಕೆ ಕೇಂದ್ರ ನಾಯಕರು ಭೇಟಿ ನೀಡಿ ಚುನಾವಣೆ ರಣಕಳಹೆ ಊದಲಿದ್ದಾರೆ.

 

ಇತ್ತೀಚೆಗೆ ಬೆಳಗಾವಿಗೆ ರಾಹುಲ್‌ ಗಾಂಧಿ ಆಗಮಿಸಿದ್ದು, ಬೃಹತ್‌ ರೋಡ್‌ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ಕೇಂದ್ರ ಬಿಜೆಪಿ ನಾಯಕರ ಸರದಿಯಾಗಿದೆ. ಮತ್ತೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತಾ ಶಾ(Amit shah) ಅವರು ಆಗಮಿಸುತ್ತಿದ್ದಾರೆ. ಮಾರ್ಚ್​​ 24 ಮತ್ತು 26ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ನಡುವೆಯೇ
ಪ್ರಧಾನಿ ನರೇಂದ್ರ ಮೋದಿ ಮಾರ್ಚ್​​ 25ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ

ಮಾರ್ಚ್‌ 26 ರಂದು ರಾಜ್ಯಕ್ಕೆ ಅಮಿತಾ ಶಾ ಬರಲಿದ್ದು, ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಲಿದ್ದಾರೆ. ಬೀದರ್​ ಜಿಲ್ಲೆ ಗೊರ್ಟಾ ಗ್ರಾಮಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಸರ್ದಾರ್ ವಲ್ಲಭಭಾಯಿ​​ ಪಟೇಲ್​ ಅವರ ಪ್ರತಿಮೆ ಉದ್ಘಾಟಿಸಲಿದ್ದಾರೆ. ನಂತರ ಗೊರ್ಟಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗುತ್ತಾರೆ.ಅಂದೇ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಾಣ ಮಾಡಲಾಗಿರುವ ನಾಡಪ್ರಭು ಕೆಂಪೇಗೌಡರ, ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

Leave A Reply

Your email address will not be published.