Baburao Chinchansur: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ! ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Baburao Chinchansur :ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ(BJP) ಗೆ ಪಕ್ಷಾಂತರದ ಬಿಸಿ ಮುಟ್ಟುತ್ತಿದೆ. ಒಂದೇ ತಿಂಗಳಲ್ಲಿ ಎರಡನೇ ಘರ್ ವಾಪಸಿ ನಡೆದು ಬಿಜೆಪಿಗೆ ಶಾಕ್ ಸಿಕ್ಕಿದೆ. ಎಂಎಲ್‍ಸಿ ಪುಟ್ಟಣ್ಣ ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಎಮ್‍ಎಲ್‍ಸಿ ಬಾಬೂರಾವ್ ಚಿಂಚನಸೂರ್(Baburao Chinchansur) ಸಹ ಬಿಜೆಪಿ ತೊರೆದಿದ್ದಾರೆ. ಸೋಮವಾರ ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿಯವರನ್ನು (Basavaraj Horatti) ಬೆಂಗಳೂರಿನಲ್ಲಿ ಭೇಟಿ ಮಾಡಿ, ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಭಾಪತಿಗಳು ಅದನ್ನು ಅಂಗೀಕರಿಸಿದ್ದಾರೆ.

ಕಳೆದ ವರ್ಷ ಜೆಡಿಎಸ್(JDS) ಪಕ್ಷದ ಸಿಎಂ ಇಬ್ರಾಹಿಂ(CM Ibrahim) ರಾಜೀನಾಮೆಯಿಂದ ತೆರವಾದ ಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಬಿಜೆಪಿಯಿಂದ ಚಿಂಚನಸೂರ್ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಸ್ಥಾನಕ್ಕೆ ಕೇವಲ ಒಂದು ವರ್ಷಕ್ಕೆ ಮಾತ್ರ ಅಧಿಕಾರ ಅವಧಿ ಇದ್ದು, ಈಗ ಅವಧಿ ಮುಕ್ತಾಯವಾಗುತ್ತಿದ್ದಂತೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಚಿಂಚನಸೂರ್ ನಂತರ ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಅಸಮಧಾನಗೊಂಡು ಬಿಜೆಪಿ ಸೇರಿದ್ದರು.

ಬಳಿಕ ನಡೆದ ಚುನಾವಣೆಯಲ್ಲಿ ಗುರುಮಿಟ್ಕಲ್(Gurumitkal) ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಸೋತಿದ್ದ ಚಿಂಚನಸೂರ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ, ಕೋಳಿ ಸಮುದಾಯವನ್ನು ಚುನಾವಣೆಗೆ ಸೆಳೆಯುವ ಪ್ರಯತ್ನವನ್ನು ಬಿಜೆಪಿ ಮಾಡಿತ್ತು. ಇದೀಗ ಬಿಜೆಪಿಗೆ ಬಿಗ್ ಶಾಕ್ ಕೊಟ್ಟು ಮತ್ತೆ ಕಾಂಗ್ರೆಸ್​ನತ್ತ ಚಿಂಚನಸೂರ್ ಮುಖ ಮಾಡಿದ್ದಾರೆ.

ಮಂಗಳವಾರ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಗುರುಮಿಠಕಲ್ ಕ್ಷೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ಭರವಸೆ ಸಿಕ್ಕಿದೆ ಎನ್ನಲಾಗಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗುವುದು ಅನುಮಾನದ ಹಿನ್ನೆಲೆಯಲ್ಲಿ ಚಿಂಚನಸೂರ್ ಮರಳಿ ಕಾಂಗ್ರೆಸ್ ಸೇರಲಿದ್ದಾರೆ. ಕಲಬುರಗಿ ಸೇರಿದಂತೆ ಕಲ್ಯಾಣ ಜಿಲ್ಲೆಗಳಲ್ಲಿ ಕೋಲಿ ಸಮಾಜದರು ಅಪಾರ ಸಂಖ್ಯೆಯಲ್ಲಿದ್ದಾರೆ. ಕೋಲಿ ಸಮಾಜದ ಪ್ರಭಾವಿ ನಾಯಕರಾಗಿರುವ ಬಾಬುರಾವ್ ಚಿಂಚನಸೂರ್, ಬಿಜೆಪಿ ತೊರೆದು ಕಾಂಗ್ರೆಸ್ (Congress) ಕದ ತಟ್ಟಿರುವುದರಿಂದ ಕಲ್ಯಾಣ ಭಾಗದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು, ಚಿಂಚನಸೂರ್​ ಬಿಜೆಪಿ ತೊರೆಯಲು ಸಿಎಂ ನಡೆಯು ಒಂದು ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಚಿಂಚನಸೂರ್​​ಗೆ ಸಿಎಂ ಗದರಿದ್ದರು. ಈ ಎಲ್ಲದರಿಂದ ಬಿಜೆಪಿ ತೊರೆದು ಈ ಹಿಂದೆ ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್​ ಪಕ್ಷಕ್ಕೆ ಹೋಗುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕೆಲ ದಿನಗಳ ಹಿಂದಷ್ಟೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚಿಂಚನಸೂರ್ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಸೋಲಿಸಿದ್ದೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಿಂದ ಪ್ರಿಯಾಂಕಾ ಖರ್ಗೆ ಸೋಲಿಸುತ್ತೇನೆ. ನನ್ನ ಶಕ್ತಿ ನಿಮಗೆ ಗೊತ್ತಿಲ್ಲ ಎಂದು ಮಾಧ್ಯಮಗಳ ಎದುರು ತೊಡೆ ತಟ್ಟಿದ್ದರು.

ಚಿಂಚನಸೂರ್ 2018 ರ ಆಗಸ್ಟ್ ನಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಸೋಲಿಸಲು ಚಿಂಚನಸೂರ್, ಮಾಲೀಕಯ್ಯ ಗುತ್ತೇದಾರ್ ಜತೆ ಆಪರೇಷನ್ ಮಾಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು. ಕಾಂಗ್ರೆಸ್‍ನಲ್ಲಿದ್ದಾಗ ಮಲ್ಲಿಕಾರ್ಜುನ ಖರ್ಗೆಯವರ ಆಪ್ತರಲ್ಲೊಬ್ಬರಾಗಿದ್ದ ಚಿಂಚನಸೂರ್ ಈಗ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ(Priyank Kharge) ಯವರ ಪ್ರಯತ್ನದಿಂದ ಮರಳಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ಇದನ್ನೂ ಓದಿ: Himachala: ಅಬ್ಬಬ್ಬಾ! ಈ ಹಳ್ಳಿಯ ಸಂಪ್ರದಾಯಗಳನ್ನ ಕೇಳಿದ್ರೆ ನೀವೇ ಬೆಚ್ಚಿಬೀಳ್ತೀರಿ! ಇಲ್ಲಿ ಆ ಒಂದು ಕಾರಣಕ್ಕೆ ಹೆಂಗಸರು ಬಟ್ಟೇಯನ್ನೇ ಧರಿಸೋಲ್ವಂತೆ!

Leave A Reply

Your email address will not be published.