KITS Recruitment 2023: ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

KITS Recruitment 2023: ಈಗಾಗಲೇ ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒಂದನ್ನು ಕಲ್ಪಿಸಲಾಗಿದೆ.

ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿಯು (KITS) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪ್ರಾಜೆಕ್ಟ್ ಎಕ್ಸಿಕ್ಯುಟಿವ್ ಪೋಸ್ಟ್‌ಗಳನ್ನು ಭರ್ತಿ ಮಾಡಲು KITS ಮಾರ್ಚ್ 2023 ರ ಅಧಿಕೃತ ಅಧಿಸೂಚನೆ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು 2023 ಏಪ್ರಿಲ್ 17 ರ ಮೊದಲು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಲು ಅಧಿಕೃತ ವೆಬ್​ಸೈಟ್​- itbtst.karnataka.gov.in ಗೆ ಭೇಟಿ ನೀಡಬಹುದು.

KITS ನೇಮಕಾತಿ 2023(KITS Recruitment 2023) ಅರ್ಹತೆಯ ವಿವರಗಳು:
KITS ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ & ಟೆಕ್ನಾಲಜಿ ಸೊಸೈಟಿ (KITS)
ಹುದ್ದೆಗಳ ಸಂಖ್ಯೆ : 07
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
ವೇತನ : ರೂ.45000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ : KITS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ : ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು.

ವಯೋಮಿತಿ ಸಡಿಲಿಕೆ : ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ KITS ಅಧಿಸೂಚನೆ ಪ್ರಮುಖ ಅಧಿಕೃತ ವೆಬ್‌ಸೈಟ್ : itbtst.karnataka.gov.in ಭೇಟಿ ನೀಡಬಹುದು.

KITS ನೇಮಕಾತಿ (ಪ್ರಾಜೆಕ್ಟ್ ಎಕ್ಸಿಕ್ಯೂಟಿವ್) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, gmit.kits@gmail.com ಮತ್ತು ipokbits@gmail.com ಗೆ 17-Apr-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಇಮೇಲ್ ಕಳುಹಿಸಬಹುದು.

Leave A Reply

Your email address will not be published.