Congress : ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ 2-3ದಿನದಲ್ಲಿ ಬಿಡುಗಡೆಯಾಗಲಿದೆ: ಡಿ.ಕೆ ಶಿವಕುಮಾರ್‌

Congress candidates list :ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ ಪಕ್ಷಗಳ ಚುನಾವಣೆ ಪ್ರಚಾರ ಬೇಟೆ ಜೋರಾಗಿದೆ. ಚುನಾವಣೆ ಹತ್ರ ಬರುತ್ತಿದ್ದಂತೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ (Congress candidates list) ಸಿದ್ದವಾಗಿದೆ. ಹೀಗಾಗಿ ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಮೂಡಿಸಿದೆ. ಆದರೆ ಇವತ್ತು ರಿಲೀಸ್‌ ಆಗಬೇಕಿದ್ದ ಕಾಂಗ್ರೆಸ್‌ ಮೊದಲ ಅಭ್ಯರ್ಥಿ ಪಟ್ಟಿ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಅವರು, 2-3ದಿನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಆಗಲಿದೆ. ಈ ಹಿಂದೆ ಕಾಂಗ್ರೆಸ್‌ ನಾಯಕರು ಹೇಳಿದ ಹಾಗೆ ಇವತ್ತು ಮೊದಲ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ ಯುಗಾದಿ ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು  ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3ದಿನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ಸುಳ್ಳು ಆಶ್ವಾಸನೆ ಕೊಟ್ಟ ಹಾಗೆ  ನಾವು ಆ ರೀತಿ ನಡೆದುಕೊಳ್ಳುವುದಿಲ್ಲ. ಕಳೆದ ಮೂರು ವರ್ಷಗಳಿಂದ ಜನರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಏನೇ ಇದ್ದರು ಜನಪರ ಕೆಲಸ ಮಾಡುತ್ತಾರೆ. ರಾಜ್ಯದ ಜನರಿಗೆ ಹಲವು ಗ್ಯಾರಂಟಿಗಳನ್ನು ಈಗಾಗಲೇ ಘೋಷಣೆ ಮಾಡಿದ್ದೇವೆ. ಆದರೆ ಬಿಜೆಪಿಯವರು ಈ ಹಿಂದೆ ಪ್ರತಿಯೊಬ್ಬ ಬ್ಯಾಂಕ್‌ ಖಾತೆಗೆ ೧೫ ಲಕ್ಷ ರೂಪಾಯಿ ಕೊಡುತ್ತೇವೆ ಎಂದಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು, ಏನಾದ್ರೂ ಮಾಡಿದ್ರಾ? ಎಂದು ಪ್ರಶ್ನಿಸಿದ್ದಾರೆ. ನಾವು ಕೊಟ್ಟ ಭರವಸೆ ಕುರಿತು ಚರ್ಚೆ ಮಾಡುತ್ತೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

Leave A Reply

Your email address will not be published.