Ramzan Fasting: ಚಂದ್ರ ದರ್ಶನ ಹಿನ್ನೆಲೆ ಇಂದಿನಿಂದ ಮಂಗಳೂರಲ್ಲಿ ರಂಜಾನ್ ಉಪವಾಸ ವ್ರತ ಆರಂಭ

Ramzan fasting : ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ಇಂದಿನಿಂದ ಮಂಗಳೂರಿನಲ್ಲಿ ಉಪವಾಸ (Ramzan fasting) ವ್ರತ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝೀ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ

ಭಾರತವು ವಿವಿಧ ಧರ್ಮಗಳು, ಸಂಸ್ಕೃತಿಗಳು, ಸಂಪ್ರದಾಯಗಳು, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶವಾಗಿದೆ. ಈ ಕಾರಣದಿಂದಾಗಿ, ದೇಶವು ವರ್ಷವಿಡೀ ಹಲವಾರು ಹಬ್ಬ (Festival)ಗಳನ್ನು ಆಚರಿಸುತ್ತದೆ, ಈದ್-ಉಲ್-ಫಿತರ್ (Eid-ul-Fitr) ಅವುಗಳಲ್ಲಿ ಒಂದಾಗಿದೆ. ಮುಸ್ಲಿಮರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು. ಈ ಹಬ್ಬವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ ರಂಜಾನ್ ಮಾಸದ ಚಂದ್ರ ದರ್ಶನವಾಗಿರೋದ್ರಿಂದ ಮಂಗಳೂರಿನಾದ್ಯಂತ ರಂಜಾನ್ ಮಾಸದ ಉಪವಾಸ ವ್ರತ ಇಂದಿನಿಂದ ಫ್ರಾರಂಭಿಸಲಾಗಿದೆ.

ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೇ ತಿಂಗಳಲ್ಲಿ ರಂಜಾನ್ ಆಚರಿಸಲಾಗುತ್ತದೆ. ಪವಿತ್ರ ಮಾಸ ರಂಜಾನ್ ಅನ್ನು ಪ್ರಪಂಚದಾದ್ಯಂತ ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಸಮಯದಲ್ಲಿ 30 ದಿನಗಳ ಕಾಲ ಪ್ರತಿದಿನ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸ ಅನುಸರಿಸುತ್ತಾರೆ. ಸೂರ್ಯಾಸ್ತದ ಸಮಯದಲ್ಲಿ ಇಫ್ತಾರ್ ಭೋಜನದೊಂದಿಗೆ ಉಪವಾಸ ಮುಗಿಯುತ್ತದೆ.

ಈದ್-ಉಲ್-ಫಿತರ್ ಆಚರಣೆ ಹೇಗಿರುತ್ತದೆ ಗೊತ್ತ ?

ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.

ಈದ್ ಹಬ್ಬವು ಚಂದ್ರನನ್ನು ನೋಡಿದ ನಂತರವೇ ಪ್ರಾರಂಭವಾಗುತ್ತದೆ. ಈದ್ ಉಲ್-ಫಿತರ್ ಉಪವಾಸದ ಅಂತ್ಯವನ್ನು ಸೂಚಿಸುತ್ತದೆ. ಪ್ರವಾದಿ ಮೊಹಮ್ಮದ್ ಅವರ ಬೋಧನೆಗಳ ದಾಖಲೆಯಾದ ಸುನ್ನತ್ ಅನ್ನು ಅನುಸರಿಸಿ, ಹಬ್ಬದಂದು ಮುಸ್ಲಿಮರು ಮುಂಜಾನೆ ಬೇಗನೆ ಎದ್ದು ತಮ್ಮ ದೈನಂದಿನ ಪ್ರಾರ್ಥನೆ ಸಲ್ಲಿಸಿ, ಸ್ನಾನ ಮಾಡಿ ಹೊಸ ಬಟ್ಟೆ ತೊಟ್ಟು ಇತ್ತರ್ (ಸುಗಂಧ ದ್ರವ್ಯ) ಧರಿಸುತ್ತಾರೆ. ಬಳಿಕ ಹಬ್ಬದ ಪ್ರಾರ್ಥನೆಗೆ ಹೋಗುವ ಮುನ್ನ ಮನೆಯಲ್ಲಿ ತಯಾರಿಸಿದ ಸಿಹಿ ತಿಂಡಿಯನ್ನು ಸೇವಿಸುತ್ತಾರೆ. ಹುಡುಗರು, ಯುವಕರು ಸೇರಿದಂತೆ ಈದ್ಗ್ ಬಳಿ ಎಲ್ಲಾ ಮುಸ್ಲಿಮರು ಒಟ್ಟಿಗೆ ಸೇರಿ ಹಬ್ಬದ ವಿಶೇಷ ಸಭೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಾರೆ. ಆದ್ರೆ ಹೆಣ್ಣು ಮಕ್ಕಳು, ಮಹಿಳೆಯರು ಮನೆಯಲ್ಲೇ ಹಬ್ಬನ ನಮಾಜ್ ಮಾಡುತ್ತಾರೆ.

Leave A Reply

Your email address will not be published.