Rahul Gandhi: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ರಾಹುಲ್‌ ಗಾಂಧಿಗೆ 2 ವರ್ಷ ಜೈಲು, 15 ಸಾವಿರ ದಂಡ! ಅಷ್ಟಕ್ಕೂ ಅಂದು ರಾಗಾ ಹೇಳಿದ್ದೇನು?

RahulGandhi :2019ರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿ(RahulGandhi)ವಿರುದ್ಧ ದಾಖಲಾಗಿದ್ದ ಮಾನನಷ್ಟ ಕೇಸ್‌ ವಿಚಾರವಾಗಿ ಗುಜರಾತ್‌(Gujarat)ನ ಸೂರತ್‌(Surat) ಕೋರ್ಟ್‌ ಗುರುವಾರ ತೀರ್ಪು ಪ್ರಕಟಿಸಿದ್ದು, ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರನ್ನು ಅಪರಾಧಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೋದಿ ಉಪನಾಮದ ಕುರಿತು ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದು, ಕಳ್ಳರೆಲ್ಲರೂ ಏಕೆ ಮೋದಿ ಎಂಬ ಉಪನಾಮವನ್ನೇ ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು.

ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿದೆ.

ಅಂದಹಾಗೆ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಹೆಚ್.ಹೆಚ್ ವರ್ಮಾ ನ್ಯಾಯಾಲಯವು ಅವರಿಗೆ ಐಪಿಸಿ ಸೆಕ್ಷನ್ 499 (ಮಾನನಷ್ಟ), 500 (ಮಾನಹಾನಿಗಾಗಿ ಶಿಕ್ಷೆ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂಪಾಯಿ ದಂಡ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಜಾಮೀನು ಕೂಡ ಪಡೆದಿದ್ದಾರೆ. ರಾಹುಲ್ ಗಾಂಧಿಯವರ ಮನವಿಯ ಮೇರೆಗೆ, ಅವರ ಶಿಕ್ಷೆಯನ್ನು ಅಮಾನತುಗೊಳಿಸಲಾಗಿದೆ, ಅವರಿಗೆ 30 ದಿನಗಳೊಳಗೆ ಕೋರ್ಟ್‌ ತನ್ನನ್ನು ಅಪರಾಧಿ ಎಂದು ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.

Leave A Reply

Your email address will not be published.