Rahul Gandhi :ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ

RahulGandhi : ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಕೋರ್ಟ್‌ ರಾಹುಲ್ ಗಾಂಧಿ (RahulGandhi) ಅವರನ್ನು ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

 

ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾಗಿದ್ದ ರಾಹುಲ್ ಗಾಂಧಿ ಅವರು 2019ರಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ವೇಳೆ ‘ಹುಡುಕಿದರೆ ಇನ್ನೊಂದಷ್ಟು ಜನ ಮೋದಿಗಳು ಸಿಗುತ್ತಾರೆ. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಹೀಗೆ ಎಲ್ಲಾ ಕಳ್ಳರ ಹೆಸರು ಮೋದಿ ಅಂತಾನೆ ಬರುತ್ತೆ’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಗುಜರಾತ್‌ನಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು.

Leave A Reply

Your email address will not be published.