Xiomi : ಶಿಯೋಮಿ ಮಿ 11X ಪ್ರೊ 5G ಫೋನ್‌ ಬೆಲೆಯಲ್ಲಿ ಇಳಿಕೆ! ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌!

xiaomi 11i : ಜನಪ್ರಿಯ ಸ್ಮಾರ್ಟ್​​ಫೋನ್​ ಕಂಪೆನಿಗಳಲ್ಲಿ ಶಿಯೋಮಿ ಕಂಪೆನಿ ಸಹ ಒಂದಾಗಿದೆ. ಈ ಕಂಪೆನಿ ಬಜೆಟ್​ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಸ್ಮಾರ್ಟ್​​ಫೋನ್​ಗಳನ್ನು (smartphone ) ಬಿಡುಗಡೆ ಮಾಡುವ ಮೂಲಕ ಬಹಳಷ್ಟು ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಈ ವರ್ಷದಲ್ಲಿ ಶಿಯೋಮಿ ಕಂಪೆನಿಯಿಂದ ಹಲವಾರು ಮೊಬೈಲ್​ಗಳು ಬಿಡುಗಡೆಯಾಗಿದ್ದು ಭಾರೀ ಬೇಡಿಕೆಯಲ್ಲಿದೆ.

 

ಈಗಾಗಲೇ ಶಿಯೋಮಿ ಸಂಸ್ಥೆ ಕಳೆದ ವರ್ಷ ಬಿಡುಗಡೆ ಮಾಡಿರುವ ಶಿಯೋಮಿ 11i (xiaomi 11i) ಹೈಪರ್‌ಚಾರ್ಜ್‌ 5G ಫೋನ್‌ ಹಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಈ ಫೋನ್‌ ಇದೀಗ ಭರ್ಜರಿ ಬೆಲೆ ಇಳಿಕೆ ಕಂಡಿದ್ದು, ಗ್ರಾಹಕರು ಮತ್ತೆ ಇತ್ತ ತಿರುಗಿ ನೋಡುವಂತೆ ಮಾಡಿದೆ.

ಇದನ್ನೂ ಓದಿ: Planet : ಭೂಮಿಯನ್ನು ವೀಕ್ಷಿಸುತ್ತಿದೆಯೇ ಅನ್ಯಗ್ರಹ ಜೀವಿಗಳು? ಕುತೂಹಲಕಾರಿ ಮಾಹಿತಿ ಬಹಿರಂಗ

ಸದ್ಯ ಶಿಯೋಮಿ 11i ಹೈಪರ್‌ಚಾರ್ಜ್‌ 5G ಫೋನ್‌ 6GB + 128GB ಮತ್ತು 8GB + 128 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಈ ಎರಡು ವೇರಿಯಂಟ್‌ಗಳಲ್ಲಿಯೂ ಈಗ 1,000 ರೂ. ಗಳ ಇಳಿಕೆ ಆಗಿದೆ. ಹೀಗಾಗಿ ಬೆಲೆ ಇಳಿಕೆ ಬಳಿಕ 6GB + 128GB ಸ್ಟೋರೇಜ್‌ ವೇರಿಯಂಟ್‌ 24,999 ರೂ. ಗಳ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು 8GB + 128GB ಸ್ಟೋರೇಜ್‌ ವೇರಿಯಂಟ್‌ 26,999 ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಶಿಯೋಮಿ 11i ಹೈಪರ್‌ಚಾರ್ಜ್‌ 5G ಯ ಫೀಚರ್ಸ್‌ಗಳು :
ಶಿಯೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ.

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಇನ್ನು 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120 W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.

ಇನ್ನು ಶಿಯೋಮಿ 11i 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ.

ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಸದ್ಯ ಶಿಯೋಮಿ 11i ಹೈಪರ್‌ಚಾರ್ಜ್‌ 5G ಫೋನ್‌ ಕ್ಯಾಮೊ ಗ್ರೀನ್, ಪೆಸಿಫಿಕ್ ಪರ್ಲ್, ಪರ್ಪಲ್ ಮಿಸ್ಟ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

Leave A Reply

Your email address will not be published.