NPS Scheme : ಎನ್ ಪಿಎಸ್ ಕುರಿತು ಸರಕಾರ ನೀಡಿದೆ ಮಹತ್ವದ ಮಾಹಿತಿ!
NPS Scheme : ಉದ್ಯೋಗಿಗಳ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಹೊಸ ಪಿಂಚಣಿ ವ್ಯವಸ್ಥೆ ( NPS scheme) ಸುಧಾರಿಸಲು ಹಣಕಾಸು ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮಾಹಿತಿ ನೀಡಿದೆ. ಪ್ರಮುಖವಾಗಿ ಉದ್ಯೋಗಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.
ಪ್ರಸ್ತುತ ಹಣಕಾಸು ಮಸೂದೆ 2023 ಅನ್ನು ಲೋಕಸಭೆಯಲ್ಲಿ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎನ್‌ಪಿಎಸ್ ಬಗ್ಗೆ ಮಹತ್ತರ ಘೋಷಣೆಯನ್ನು ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಳವಡಿಸಿಕೊಳ್ಳಲು ಎನ್‌ಪಿಎಸ್‌ಗೆ ಹೊಸ ವಿಧಾನವನ್ನು ವಿನ್ಯಾಸಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಾರ “ಪಿಂಚಣಿಗಳ ಸಮಸ್ಯೆಯನ್ನು ಪರಿಶೀಲಿಸಲು ಮತ್ತು ಸಾಮಾನ್ಯ ನಾಗರಿಕರನ್ನು ಹಣಕಾಸಿನ ವಿಚಾರದಲ್ಲಿ ರಕ್ಷಿಸಲು, ಉದ್ಯೋಗಿಗಳ ಅಗತ್ಯತೆಗಳನ್ನು ತಿಳಿಸುವ ವಿಧಾನವನ್ನು ಜಾರಿ ಮಾಡಲು ಹಣಕಾಸು ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ಸ್ಥಾಪಿಸಲು ನಾನು ಪ್ರಸ್ತಾಪಿಸುತ್ತೇನೆ,” ಜೊತೆಗೆ ಆರ್ಥಿಕ ಅಭಿವೃದ್ದಿಯಲ್ಲಿ ಅಮೇರಿಕಾ, ಜಪಾನ್ ಹಿಂದಿಕ್ಕಿದ ಭಾರತ “ಈ ನೂತನ ವಿಧಾನವನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರವೆರಡೂ ಅಳವಡಿಸಿಕೊಳ್ಳಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗುತ್ತದೆ,” ಎಂದು ತಿಳಿಸಿದ್ದಾರೆ.
ಮುಖ್ಯವಾಗಿ ಹಲವಾರು ಬಿಜೆಪಿಯೇತರ ರಾಜ್ಯಗಳು ಡಿಎ-ಲಿಂಕ್ ಆಗಿರುವ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮತ್ತೆ ಜಾರಿಗೆ ತರಲು ನಿರ್ಧಾರ ಮಾಡಿದೆ. ಈ ಹಿನ್ನೆಲೆಯಿಂದಾಗಿ ಕೇಂದ್ರ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ. ಉಳಿದ ರಾಜ್ಯಗಳಲ್ಲೂ ಡಿಎ-ಲಿಂಕ್ ಆದ ಪಿಂಚಣಿ ವ್ಯವಸ್ಥೆ ಜಾರಿಯ ಆಗ್ರಹ ಕೇಳಿಬಂದಿದೆ. ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ರಾಜ್ಯ ಸರ್ಕಾರಗಳು ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿ ಮಾಡುವ ನಿರ್ಧಾರದ ಬಗ್ಗೆ ಕೇಂದ್ರಕ್ಕೆ ತಿಳಿಸಿವೆ. ಹಾಗೆಯೇ ಎನ್‌ಪಿಎಸ್ ಅಡಿಯಲ್ಲಿ ಸಂಗ್ರಹವಾದ ಕಾರ್ಪಸ್‌ನ ಮರುಪಾವತಿ ಮಾಡಬೇಕೆಂದು ವಿನಂತಿ ಮಾಡಿದೆ.
ಜನವರಿ 1, 2004 ರ ನಂತರ ನೇಮಕಗೊಂಡ ಕೇಂದ್ರ ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಹಳೆ ಪಿಂಚಣಿ ವ್ಯವಸ್ಥೆಯನ್ನು (ಒಪಿಎಸ್) ಮರುಸ್ಥಾಪಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಈ ತಿಂಗಳ ಆರಂಭದಲ್ಲಿ ಸಂಸತ್ತಿಗೆ ತಿಳಿಸಿದೆ.