Indhira Gandhi : ರಾಹುಲ್ ಗಾಂಧಿಯಂತೆ ಇಂದಿರಾ ಗಾಂಧಿ ಕೂಡ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು! ಅಷ್ಟಕ್ಕೂ ಇಂದಿರಾ ಮಾಡಿದ ಅಪರಾಧವೇನು?
Indhira Gandhi : ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣ ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್(Surat Court) ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಬೆನ್ನಲ್ಲೇ ಲೋಕಸಭೆಯಿಂದ(Parliment) ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಲಾಗಿತ್ತು. ಹಾಗೆ ನೋಡಿದರೆ, ಹಲವು ಸಂಸದರು, ಶಾಸಕರು ಸಹ ಇದೇ ರೀತಿ ತಮ್ಮ ಚುನಾಯಿತ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಆ ಸಾಲಿನಲ್ಲಿ. ರಾಹುಲ್ ಗಾಂಧಿಯವರ ಅಜ್ಜಿ ಇಂದಿರಾಗಾಂಧಿ(Indhira gandhi) ಸಹ ಇದ್ದಾರೆ. ಹಾಗಿದ್ರೆ ಯಾಕೆ ಇಂದಿರಾಗಾಂಧಿ ಅನರ್ಹಗೊಂಡಿದ್ದರು?
ಹೌದು, ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿ ಸ್ಥಾನ ಕಳೆದುಕೊಂಡಿರುವುದು ಇದೇ ಮೊದಲೇನಲ್ಲ. ಭಾರತದ ರಾಜಕೀಯ ಇತಿಹಾಸದಲ್ಲಿ ಅನೇಕ ಶಾಸಕರು, ಸಂಸದರೂ ಮಾನನಷ್ಟ ಮೊಕದ್ದಮೆಗೆ ಒಳಗಾಗಿ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ. ಕಾಕತಾಳೀಯವೆಂಬಂತೆ ಈ ಸಾಲಿನಲ್ಲಿ ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ (Indira Gandhi) ಅವರೂ ಸೇರಿದ್ದಾರೆ.
ಅಂದಹಾಗೆ 1975ರಲ್ಲಿ ಅಲಹಾಬಾದ್(Alahabad) ಹೈಕೋರ್ಟ್ ನ್ಯಾಯಮೂರ್ತಿ ಜಗಮೋಹನ್ ಲಾಲ್ ಸಿನ್ಹಾ ಇಂದಿರಾ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ದೇಶವೇ ತಿರುಗಿ ನೋಡುವಂತಹ ತೀರ್ಪು ನೀಡಿದ್ದರು. ಚುನಾವಣಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಮೂರ್ತಿ, ಜನಪ್ರತಿನಿಧಿ ಕಾಯಿದೆಯ ಅಡಿಯಲ್ಲಿ 6 ವರ್ಷಗಳ ಕಾಲ ಯಾವುದೇ ಚುನಾಯಿತ ಹುದ್ದೆಯಲ್ಲಿ ಮುಂದುವರಿಯದಂತೆ ತಡೆ ಹಾಕಿದ್ದರು. ಆ ದಿಟ್ಟ ತೀರ್ಪು ತುರ್ತು ಪರಿಸ್ಥಿತಿಯ ಘೋಷಣೆಗೆ ನೇರವಾಗಿ ಕಾರಣವಾಯಿತು ಎಂದು ಹೇಳಲಾಗುತ್ತದೆ.
ಜನಪ್ರತಿನಿಧಿಗಳ ಕಾಯ್ದೆ ಏನು ಹೇಳುತ್ತದೆ?
ಜನಪ್ರತಿನಿಧಿಗಳ ಕಾಯ್ದೆಯಂತೆ ಶಾಸಕರು/ ಸಂಸದರು ಎರಡು ನಿದರ್ಶನಗಳಲ್ಲಿ ತಮ್ಮ ಸ್ಥಾನದಿಂದ ಅನರ್ಹರಾಗಬಹುದು. ಮೊದಲು ಸೆಕ್ಷನ್ 153A (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ ಮತ್ತು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಥವಾ ಸೆಕ್ಷನ್ 171E (ಲಂಚ ತೆಗೆದುಕೊಳ್ಳುವುದು)ನಂತಹ ಪ್ರಕರಣ ಅಥವಾ ಸೆಕ್ಷನ್ 171F (ಚುನಾವಣೆಯಲ್ಲಿ ಅನಗತ್ಯ ಪ್ರಭಾವದ) ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾದರೆ ತಮ್ಮ ಸ್ಥಾನವನ್ನು ಸಂಸದರು ಕಳೆದುಕೊಳ್ಳಲಿದ್ದಾರೆ.
ಶಾಸಕರು ಅಥವಾ ಸಂಸದರು ಯಾವುದೇ ಇತರ ಅಪರಾಧ ಪ್ರಕರಣಗಳಲ್ಲಿ ಎರಡು ವರ್ಷ ಅಥವಾ ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾಗಿದ್ದಾರೆ ಅವರನ್ನು ಶಾಸಕ/ ಸಂಸದ ಸ್ಥಾನದಿಂದ ಅನರ್ಹಗೊಳಿಸಬಹುದು. ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಕಾರಣ ಈಗ ಈ ಕಾಯ್ದೆಯ ಅಡಿ ಅನರ್ಹ ಮಾಡಲಾಗಿದೆ.
2019ರಲ್ಲಿ ಮೋದಿ ಉಪನಾಮವನ್ನು ವ್ಯಂಗ್ಯ ಮಾಡಿದ್ದ ಆರೋಪ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಗುರುವಾರ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಶುಕ್ರವಾರ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: Rahul Gandhi: ಲೋಕಸಭೆ ಸದಸ್ಯತ್ವದಿಂದ ಅನರ್ಹವಾದ ಬಳಿಕ ರಾಹುಲ್ ಗಾಂಧಿಗೆ ಎಲ್ಲಿಂದೆಲ್ಲಾ ಕೊಕ್ ಗೊತ್ತ? ಅವರ ಮುಂದಿನ ನಡೆ ಏನು?