Amit shah : ಇಂದು ಬೆಂಗಳೂರಿಗೆ ಮತ್ತೆ ಚುನಾವಣಾ ಚಾಣಕ್ಯ ಅಮಿತ್‌ ಷಾ ಆಗಮನ : ಪರ್ಯಾಯ ಮಾರ್ಗ ಬಳಸಲು ಸೂಚನೆ

Amit shah :ಮುಂದಿನ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ಮತ್ತೆ ಮತ್ತೆ ದೇಶದ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಆಗಮಿಸುತ್ತಿದ್ದಾರೆ. ಇಂದು ಮತ್ತೆ ಬೆಂಗಳೂರಿನಲ್ಲಿ ಅಮಿತ್‌ ಷಾ ಆಗಮಿಸಿ ಸಂಚಲನ ಸೃಷ್ಟಿಸಲಿದ್ದಾರೆ.

 

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೀದರ್, ರಾಯಚೂರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ(Bengaluru) ಹೃದಯ ಭಾಗದಲ್ಲಿ ಟ್ರಾಫಿಕ್ ಬಿಸಿ ತಟ್ಟಲಿದೆ. ಇದರಿಂದ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು.

ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಸಂಸ್ಥಾಪಕ ಕೆಂಪೇಗೌಡ ಮತ್ತು ಲಿಂಗಾಯತ ಸಮಾಜ ಸುಧಾರಕ ಬಸವೇಶ್ವರ ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್‌ ಶಾ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ರೇಸ್​ಕೋರ್ಸ್​ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಲಾಗಿರುವ ಗುಜರಾತ್​ ಸಮಾಜದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ನಿರ್ಮಿಸಿರುವ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ತದನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರಾತ್ರಿ 8.30ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ, ಖಾಸಗಿ ಹೋಟೆಲ್​ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಲಿದ್ದಾರೆ.

ಬೆಂಗಳೂರಿಗೆ ಇಂದು ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಆಗಮನ ಹಿನ್ನೆಲೆ ಮತ್ತೆ ಟ್ರಾಫಿಕ್‌ ಕಿರಿಕಿರಿ ಉಂಟಾಗಲಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ .ಬಳ್ಳಾರಿ ರಸ್ತೆ, ಹೆಬ್ಬಾಳ ಸರ್ಕಲ್, ಮೇಖ್ರಿ ಸರ್ಕಲ್, ಕಾವೇರಿ ಜಂಕ್ಷನ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ನೃಪತುಂಗ ರಸ್ತೆ, ಕ್ವೀನ್ಸ್ ರಸ್ತೆ, ಕೆ.ಆರ್ ಸರ್ಕಲ್, ಹಡ್ಸನ್ ಸರ್ಕಲ್, ಹಳೆ ಏರ್​ಪೋರ್ಟ್​ ರಸ್ತೆ, ಟ್ರಿನಿಟಿ ಸರ್ಕಲ್ ಹಾಗೂ ಟೌನ್ ಹಾಲ್ ಸುತ್ತಮುತ್ತ ಪರ್ಯಾಯ ಮಾರ್ಗ ಬಳಸಲು ಸೂಚಿಸಿದ್ದಾರೆ.

Leave A Reply

Your email address will not be published.