Gift politics: ವಿಧಾನಸಭೆ ಚುನಾವಣೆಗೆ ಶುರುವಾಯ್ತು ರಾಜ್ಯದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ..!? ಅಕ್ರಮ ಹಣ, ಸೀರೆ, ಬೆಳ್ಳಿ ಬಂಗಾರ ಪೊಲೀಸರ ವಶಕ್ಕೆ

Gift politics :ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ, ಹೀಗಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌,ಬಿಜೆಪಿ, ಜೆಡಿಎಸ್‌ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ನುಡುವೆಯೇ ಕೆಲ ನಾಯಕರು ತಮ್ಮ ಕ್ಷೇತ್ರ ಭದ್ರತೆ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ಮಾಟ ಮಂತ್ರ ಕಡೆ ಮೊರೆ ಹೋಗಿದ್ದಾರೆ. ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಮತದಾರರನ್ನು ಸೆಳೆಯಲು ಗಿಫ್ಟ್‌ ಪಾಲಿಟಿಕ್ಸ್‌ (Gift politics) ಶುರುವಾಗಿದೆ. ಇತ್ತ, ವಿಧಾನಸಭೆ ಚುನಾವಣೆ ಘೋಷಣೆ ಆಗುವ ಮುಂಚೆಯೇ ರಾಜ್ಯದಲ್ಲಿ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದಾರೆ.ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಚೆಕ್‌ ಪೋಸ್ಟ್‌ ತೆರೆದಿದ್ದಾರೆ.

ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದಾರೆ. ಶನಿವಾರ ರಾತ್ರಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ವಾಹನಗಳ ತಪಾಸಣೆ ಶುರು ಮಾಡಿದ್ದಾರೆ.ಬೈಕ್, ಕಾರು, ಆಟೋ, ಲಾರಿ ಸೇರಿದಂತೆ ಎಲ್ಲಾ ವಾಹನಗಳನ್ನು ತಪಾಸಣೆಯನ್ನು ಪೊಲೀಸರು ನಡೆಸಿದ್ದಾರೆ. ನಗರದಿಂದ ಹೊರ ಹೋಗುವ, ಒಳಬರುವ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಿದ್ದಾರೆ.
.ಅಕ್ರಮವಾಗಿ ಹಣ, ಮದ್ಯ, ಉಡುಗೊರೆ ಸೇರಿದಂತೆ ಅನುಮಾನಾಸ್ಪದ ವಸ್ತುಗಳ ಬಗ್ಗೆ ನಿಗಾ ಇಟ್ಟಿರುವ ಪೊಲೀಸರು, ಮೊದಲ ದಿನವೇ ಎಸ್‌ಜೆ ಪಾರ್ಕ್ ಪೊಲೀಸರಿಂದ ದಾಖಲೆಯಿಲ್ಲದ ಹತ್ತು ಕೆಜಿ ಬೆಳ್ಳಿ ವಸ್ತುಗಳು ಜಪ್ತಿ ಪಡೆದುಕೊಂಡಿದ್ದಾರೆ.

ಕೊಪ್ಪಳ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷದ 15 ಸಾವಿರ ರೂಪಾಯಿಯ ಜೊತೆ ಬಟ್ಟೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಪ್ಪಳದಿಂದ ಹೊಸಪೇಟೆಗೆ ಗೌತಮ್ ಜೈನ್ ಹಾಗೂ ಜಿತೇಂದ್ರ ಜೈನ್ ಎನ್ನುವವರು ದಾಖಲೆ ಇಲ್ಲದ ಲಕ್ಷಾಂತರೂ ಹಣವನ್ನ ಸ್ಕೂಟಿಯಲ್ಲಿ ಇಟ್ಟುಕೊಂಡು ಹೋಗುತ್ತಿದ್ದರು. ಈ ವೇಳೆ ಚೆಕ್‌ ಪೋಸ್ಟ್‌ ನಲ್ಲಿ ತಪಾಸಣೆ ನಡೆಸಲಾಗಿದ್ದು, ಆತ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದಿದ್ದಾನೆ.
ಇನ್ನು ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಚೆಕ್​ಪೋಸ್ಟ್​​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಇಳಕಲ್​​ನಿಂದ ಕುಷ್ಟಗಿ ಕಡೆ ಹೋಗುತ್ತಿದ್ದ ಮಹಿಂದ್ರಾ ಸ್ಕಾರ್ಫಿಯೋ ಕಾರನ್ನು ತಪಾಸಣೆ ನಡೆಸಲಾಗಿತ್ತು.

ಗದಗ: ಗಜೇಂದ್ರಗಡ ಪಟ್ಟಣದ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ವಶಕ್ಕೆ ಪಡೆದಿದ್ದಾರೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ.

Leave A Reply

Your email address will not be published.