Heavy rain in karnataka: ಇಂದು ಸಂಜೆಯೊಳಗೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Heavy rain in karnataka: ಬೆಂಗಳೂರು: ಇನ್ನೇನು ಬೇಸಿಗೆ ಆರಂಭಗೊಂಡಿದೆ. ಬಿಸಲಿನ ತಾಪಮಾನ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತ, ಸೆಕೆ ತಾಳಲಾರದೇ ಜನರು ರೋಸಿ ಹೋಗಿದ್ದಾರೆ. ಇದರಿಂದಾಗಿ ಕೂಲ್‌ ಡ್ರಿಂಕ್ಸ್‌ , ಕೂಲರ್‌, ಫ್ಯಾನ್ ಕಡೆಗೆ ಹೆಚ್ಚು ಜನರು ಗಮನಹರಿಸುತ್ತಿದ್ದಾರೆ. ಬಿಸಲಿನ ಶಾಖಕ್ಕೆ ಮಳೆನಾದ್ರೂ ಬರಬಾರದೇ ಅಂತಾ ಆದೆಷ್ಟು ಜನರ ಅಂದುಕೊಳ್ಳುತ್ತಾರೆ. ಇದೀಗ ಬಿಸಲಿನ ಬೇಗೆಗೆ ಸುಡುತ್ತಿದ್ದ ಜನರಿಗೆ ಇಂದು ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

 

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಇನ್ನು(Heavy rain in karnataka) ಮೈಸೂರು , ಕೋಲಾರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ತಾಪಮಾನ 2 ಡಿಗ್ರಿಗಳಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಸಂಜೆ ಹೊತ್ತಿಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇನ್ನು ಕರಾವಳಿ ಪ್ರದೇಶದಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚು ಇದೆ.

ಎಚ್​ಎಎಲ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ರಷ್ಟು ದಾಖಲೆ ಆಗಿದೆ.
ದೆಹಲಿಯಲ್ಲೂ ಸಹ ನಿನ್ನೆ ಭಾರಿ ಮಳೆ ಸುರಿದಿದೆ. ಸುಮಾರು 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್‌ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ.ಒಟ್ಟಾರೆಯಾಗಿ ಬಿಸಲಿನ ತಾಪಕ್ಕೆ ತತ್ತರಿಸಿದ ಜನರಿಗೆ ಇಂದು ಮಳೆರಾಯ ತಂಪೆರಲಿದ್ದಾನಾ? ಎಂದು ಕಾದುನೋಡಬೇಕಿದೆ.

Leave A Reply

Your email address will not be published.