Leave to Govt Employees: ಮಾರ್ಚ್ 1 ರಂದು ಮುಷ್ಕರ ಮಾಡಿದ್ದ ಸರ್ಕಾರಿ ನೌಕರರಿಗೆ ಒಂದು ದಿನ ಹಕ್ಕಿನ ರಜೆ ಘೋಷಿಸಿದ ಸರ್ಕಾರ !

Leave to Govt Employees: ಮಾರ್ಚ್ 1 ರಂದು ಸರ್ಕಾರಿ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಈ ಮುಷ್ಕರದ ದಿನ ಕರ್ತವ್ಯಕ್ಕೆ ಗೈರು ಹಾಜರಾದುದನ್ನು ನೌಕರರ ಹಕ್ಕಿನಲ್ಲಿರುವ ಅಥವಾ ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸಲು ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕರೆಯ ಮೇರೆಗೆ ದಿನಾಂಕ ಮಾರ್ಚ್ 1 ರಂದು ನಡೆದ ಮುಷ್ಕರದಲ್ಲಿ ಭಾಗವಹಿಸಿದ ಕಾರಣದಿಂದಾಗಿ ಕಛೇರಿಗೆ ಗೈರು ಹಾಜರಾದ ನೌಕರರಿಗೆ ಅಂದಿನ ದಿನವನ್ನು ನೌಕರರ ಹಕ್ಕಿನಲ್ಲಿರುವ ಮತ್ತು ಪಡೆಯಲು ಅರ್ಹರಿರುವ ರಜೆ ಎಂದು ಪರಿಗಣಿಸಿ (Leave to Govt Employees)  ಆದೇಶ ಹೊರಡಿಸಲು ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರವನ್ನು ಕೋರಿತ್ತು. ಈ ಕೋರಿಕೆಯನ್ನು ಪರಿಶೀಲಿಸಿ ಸರ್ಕಾರವು ಈ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕರೆಯ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಮುಷ್ಕರ ಮಾಡಿ ಕಚೇರಿಗೆ ಗೈರು ಹಾಜರಾದವರಿಗೆ, ಆ ದಿನಾಂಕದಂದು ನೌಕರರ ಹಕ್ಕಿನಲ್ಲಿರುವ ರಜೆ ಎಂದು ಪರಿಗಣಿಸಲು ಆದೇಶಿಸಿದೆ ಎಂದು ಸೋಮವಾರ ಹೊರಡಿಸಿರುವ ಆದೇಶಲ್ಲಿ ತಿಳಿಸಲಾಗಿದೆ.

ಅಂದು ಮಾರ್ಚ್‌ 1ರಂದು ಒಂದು ಕಡೆ ನೌಕರರು ಮುಷ್ಕರ ಆರಂಭಿಸಲು ಯೋಜನೆ ಹಾಕಿಕೊಂಡಿದ್ದರೆ, ಮತ್ತೊಂದು ಕಡೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಭೇಟಿ ನೀಡಿ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ನೌಕರರ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಮುಖ್ಯಮಂತ್ರಿಗಳು ಮಾತನಾಡಿ, “ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡುವ ತೀರ್ಮಾನ ಆಗಿದೆ. ಈ ಕುರಿತು ಶೀಘ್ರದಲ್ಲೇ ಆದೇಶ ಪ್ರಕಟವಾಗಲಿದೆ. ನೌಕರರು ಮುಷ್ಕರ ವಾಪಸ್ ಪಡೆಯುವ ನಿರೀಕ್ಷೆ ಇದೆ” ಎಂದು ಹೇಳಿದ್ದರು. ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಹಣಕಾಸು ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದರು. ಬಳಿಕ ಸರ್ಕಾರಿ ನೌಕರರಿಗೆ ಮಧ್ಯಂತರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡುವ ಬಗ್ಗೆ ಅಧಿಕೃತವಾದ ಆದೇಶ ಪ್ರಕಟವಾಗಿತ್ತು. ಆ ಆದೇಶ ಪ್ರಕಟವಾದ ಬಳಿಕ ಮುಷ್ಕರವನ್ನು ನೌಕರರು ವಾಪಸ್ ಪಡೆದಿದ್ದರು. ಅಂದು ರಜೆ ಹಾಕಿ ಮುಷ್ಕರದಲ್ಲಿ ಪಾಲ್ಗೊಂಡ ಎಲ್ಲರಿಗೂ ಹಕ್ಕಿನ ರಜೆ ಘೋಷಿಸಲಾಗಿದೆ.

Leave A Reply

Your email address will not be published.