Kirik Keerthi: ಹೆಂಡತಿ ಬಿಟ್ಟು ಹೋದಮೇಲೆ ಅಂತೂ ಒಂದು ನಿರ್ಧಾರಕ್ಕೆ ಬಂದ ಕಿರಿಕ್ ಕೀರ್ತಿ! ಏನು ಗೊತ್ತಾ ಆ ಮಹತ್ವದ ನಿರ್ಧಾರ?

Kirik Keerthi :ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಕಿರಿಕ್ ಕೀರ್ತಿ (Kirik Keerthi) ಎಲ್ಲರಿಗೂ ಚಿರಪರಿತರೆ. ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಇವರು ರಿಯಾಲಿಟಿ ಶೋಗಳಲ್ಲಿ (Reality Show) ಭಾಗವಹಿಸಿ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಆದ್ರೆ ಇತ್ತೀಚೆಗೆ ಕೀರ್ತಿ ಅವರು ತಮ್ಮ ವೈಯಕ್ತಿಕ ಜೀವನದ ಬಿರುಕಿನ ವಿಚಾರಕ್ಕಾಗಿ ಸಾಕಷ್ಟು ಸುದ್ಧಿಯಲ್ಲಿದ್ದಾರೆ. ಇದೆಲ್ಲದರ ನಡುವೆ ಕೀರ್ತಿಯವರು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

 

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅರಿವು ಮೂಡಿಸುವಂತಹ ಕೆಲಸವನ್ನು ಮಾಡಿದ ಕಿರಿಕ್ ಕೀರ್ತಿ ಅವರು ಅದೇ ಸೋಷಿಯಲ್ ಮೀಡಿಯಾದಲ್ಲಿ (Social Media) ತಮ್ಮ ಬದುಕಿನ ನೋವಿನ ಘಟನೆಯನ್ನು ಶೇರ್ ಮಾಡಿಕೊಂಡಿದ್ದರು. ವೈಯಕ್ತಿಕ ಜೀವನದಲ್ಲಿ (Personal Life) ಉಂಟಾದ ನೋವಿನ ಕಣ್ಣೀರಿನ ಕಥೆಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗ ಪಡಿಸಿದ್ದರು. ಇದು ಗಾಳಿ ಸುದ್ಧಿ ಅನ್ನೋ ವಿಚಾರ ಕೂಡ ಹರಿದಾಡಿತ್ತು. ಆದರೆ ಇದೆಲ್ಲವನ್ನೂ ಬದಿಗಿಟ್ಟು ಕೀರ್ತಿ ಅವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ.

ಅದೇನೆಂದರೆ ಈ ರೀತಿ ನನ್ನ ವಿರುದ್ಧವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವ ಸೈದ್ಧಂತಿಕ ವಿರೋಧಿಗಳಿಗೆ ನೀವು ಎಷ್ಟು ಬೇಕಾದರೂ ನನ್ನ ವಿರುದ್ಧ ನಿಮಗನಿಸಿದ್ದನ್ನು ಬರೆದುಕೊಳ್ಳಿ ಆದರೆ ಅದರಿಂದ ನಾನು ಹೊರಬರುವುದಕ್ಕೆ ಹಾಗೂ ಇನ್ನಷ್ಟು ಉತ್ತಮ ವ್ಯಕ್ತಿಯಾಗುವುದಕ್ಕೆ ಪ್ರಯತ್ನಪಡುತ್ತೇನೆ. ಹೊಸ ಹೊಸ ವಿಚಾರಗಳೊಂದಿಗೆ ನಿಮ್ಮೆದುರು ಬರುತ್ತೇನೆ ಎಂಬುದಾಗಿ ಹೇಳುವ ಮೂಲಕ ಈ ಘಟನೆಯ ವಿರುದ್ಧ ತಮ್ಮ ನಿರ್ಧಾರವನ್ನು ಹೇಳಿದ್ದಾರೆ.

ಸದ್ಯಕ್ಕೆ ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತ(Arpitha Keerthi) ಇಬ್ಬರೂ ಕೂಡ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಸದ್ಯಕ್ಕೆ ಈ ಸನ್ನಿವೇಶದಿಂದ ಹೊರಬಂದಿರುವ ಕಿರಿಕ್ ಕೀರ್ತಿ(Kirik Keerthy) ಅಂತಹ ಹೊಸ ಬದುಕಿಗಾಗಿ ನಾನು ಕಾತರನಾಗಿದ್ದು ಸಿಗುವ ಅವಕಾಶವನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ನನ್ನನ್ನು ನಾನು ಇನ್ನಷ್ಟು ಇಂಪ್ರೂವ್ ಮಾಡೋದಕ್ಕೆ ಪ್ರಯತ್ನಿಸುತ್ತೇನೆ ಎಂಬುದಾಗಿ ತಮ್ಮ ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

ಅಂದಹಾಗೆ ಈ ಹಿಂದೆ ಮಗನ ಜೊತೆಗಿರುವ ಫೋಟೋ ಶೇರ್ ಮಾಡಿದ ಕಿರಿಕ್ ಕೀರ್ತಿ, ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ ಎಂದು ಹೇಳಿದ್ದರು. ಅಲ್ಲದೇ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು ಎಂದು ಸಾಮಾಜಿಕ ಜಾಲತಾದಲ್ಲಿ ದೀರ್ಘವಾದ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಈ ಕೆಳಗಿನಂತೆ ಬರೆದುಕೊಂಡಿದ್ರು.

ನಿರ್ಧಾರ ಮಾಡಿಬಿಟ್ಟಿದ್ದೆ. ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ. ಕಾರಣಗಳು ಹಲವು. ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು. ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು. ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಇನ್ವೆಸ್ಟ್ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದ್ವು, ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ’ ಎಂದು ಬರೆದುಕೊಂಡಿದ್ದಾರೆ.

’10 ನಿಮಿಷ ಧ್ಯಾನ ಮಾಡ್ದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ‌ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಾಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಾಸ್ ತರುವ ತನಕ ಪ್ರಯತ್ನ‌ ನಿರಂತರ. ಇದು ಹೇಳಿಕೊಳ್ಳಬಾರದ ವಿಷಯ. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ’ ಎಂದು ಕಿರಿಕ್ ಕಾರ್ತಿ ತನ್ನ ನೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

ಇದನ್ನೂ ಓದಿ: ಟಿಪ್ಪುವನ್ನು ಕೊಂದ ಕ್ರೆಡಿಟ್ ಕೊಡವರಿಗೆ ಹೋಗ್ಬೇಕು: ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಹೇಳಿಕೆ

Leave A Reply

Your email address will not be published.