Meat Sale Ban : ಮಾ.30ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ !

Meat Sale Ban :ಬೆಂಗಳೂರು : ಮಾರ್ಚ್ 30ರಂದು ಶ್ರೀರಾಮ ನವಮಿ” ಹಬ್ಬದ ಪ್ರಯುಕ್ತ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗುತ್ತದೆ (Meat Sale Ban) ಎಂದು ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದೆ. .

ಧಾರ್ಮಿಕ ಆಚರಣೆಯಾದ ಶ್ರೀರಾಮ ನವಮಿ ಯಲ್ಲಿ ಮಾರ್ಚ್ 30ರಂದು ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಈ ಸಂಬಂಧ ಬಿಬಿಎಂಪಿಯ ಜಂಟಿ ನಿರ್ದೇಶಕರು (ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 30.03.2023ರ ಗುರುವಾರ “ಶ್ರೀರಾಮ ನವಮಿ” ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಯಾರೊಬ್ಬರೂ ನಿಯಮ ಹಾಗೂ ಪಾಲಿಕೆಯ ಆದೇಶವನ್ನು ಉಲ್ಲಂಘನೆ ಮಾಡಬಾರದು ಎಂದು ಬಿಬಿಎಂಪಿ ಪಶುಪಾಲನೆಯ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ.

Leave A Reply

Your email address will not be published.