Karnataka Election Updates : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ !
Karnataka Election Updates : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗಿದೆ. Karnataka Election Updates) ಇಂದು ಬೆಳಗ್ಗೆ 11.30ಕ್ಕೆ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು (Election Dates) ಪ್ರಕಟಿಸಿದೆ. ಮೇ 10ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಣೆಯಾಗಿದೆ. ಚುನಾವಣಾ ಆಯೋಗ ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ದಿನಾಂಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಿದೆ.
ಮೇ 23ರ ಒಳಗೆ ನಾವು ಸರ್ಕಾರ ರಚನೆ ಮಾಡಬೇಕು . ಮೇ 24ಕ್ಕೆ ಕರ್ನಾಟಕದ 15ನೇ ವಿಧಾನಸಭೆ ಅವಧಿ ಅಂತ್ಯಗೊಳ್ಳಲಿದೆ.
ದೇಶದಲ್ಲಿಯೇ ಮೊದಲ ಪ್ರಯತ್ನ ಎಂಬಂತೆ ಈ ಬಾರಿ ಕರ್ನಾಟಕದಲ್ಲಿ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಜೇನುಕುರುಬ ಮತ್ತು ಕಾಡುಕುರುಬ ಜನಾಂಗದವರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್ ಕುಮಾರ್ ಹೇಳಿದರು.
ದಿಲ್ಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಂದ ಸುದ್ದಿಗೋಷ್ಠಿ ಆರಂಭಿಸಿ, ಕರ್ನಾಟಕ ವಿಧಾನಸಭಾ ಚುನಾವಣೆಯ ವಿವರ ನೀಡಿದ್ದಾರೆ.
ಕರ್ನಾಟಕದಲ್ಲಿ 5.22 ಕೋಟಿ ಮತದಾರರಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಹೊಸ ಮತದಾರರ ಸೇರ್ಪಡೆಗೂ ಒತ್ತು ನೀಡಿದ್ದೇವೆ. 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಕಲ್ಪಿಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದರು. 2018-19 ರಿಂದ ಕರ್ನಾಟಕದಲ್ಲಿ ಮೊದಲ ಬಾರಿಗೆ 9.17 ಲಕ್ಷ ಮತದಾರರು ಹೆಚ್ಚಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಏಪ್ರಿಲ್ 1ಕ್ಕೆ 18 ವರ್ಷ ತುಂಬುವ ಎಲ್ಲಾ ಯುವ ಮತದಾರರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿಯೂ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿದ್ದೇವೆ ಎಂದು ತಿಳಿಸಿದರು.
225 ಸ್ಥಾನಗಳ ಕರ್ನಾಟಕ ವಿಧಾನಸಭೆಯ ಅಧಿಕಾರಾವಧಿ ಮೇ 24 ರಂದು ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಮತದಾರರ ಸಂಖ್ಯೆ 5 ಕೋಟಿ 21 ಲಕ್ಷ. ಈ ಪೈಕಿ ಮಹಿಳಾ ಮತದಾರರ ಸಂಖ್ಯೆ ಎರಡು ಕೋಟಿ 59 ಲಕ್ಷ. ರಾಜ್ಯದ 225 ವಿಧಾನಸಭಾ ಸ್ಥಾನಗಳ ಪೈಕಿ 36 ಸ್ಥಾನಗಳನ್ನು ಪರಿಶಿಷ್ಟ ಜಾತಿಗೆ ಮತ್ತು 15 ಸ್ಥಾನಗಳನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ತನ್ನ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ತನ್ನ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತ್ತು. ಅದೇ ಸಮಯದಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಮತ್ತು ಜೆಡಿಎಸ್ 37 ಸ್ಥಾನಗಳನ್ನು ಪಡೆದುಕೊಂಡಿತ್ತು. ಇತರರು ಮೂರು ಸ್ಥಾನಗಳನ್ನು ಪಡೆದಿತ್ತು. 2018ರಲ್ಲಿ 224 ಸ್ಥಾನಗಳ ಪೈಕಿ 222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.