Karnataka election : ಕರ್ನಾಟಕ ಚುನಾವಣೆಯಲ್ಲಿ ಈ ಬಾರಿ ಇವರಿಗೆ ಮನೆಯಿಂದಲೇ ಮತ ಹಾಕುವ ಅವಕಾಶ !!!

Karnataka election : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಇಡೀ ರಾಜ್ಯದಲ್ಲಿ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡಲು ಕೇಂದ್ರ ಚುನಾವಣಾ ಆಯೋಗ ಅವಕಾಶ ನೀಡಿದೆ. ಅವರು ಯಾರು, ಯಾಕೆ ಆ ಕೆಲವರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಎನ್ನುವುದನ್ನು ಗಮನಿಸೋಣ.

 

ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ. ಈ ಹಿಂದೆ ಅಂಚೆ ಮತ ಹಾಕುವ ಅವಕಾಶಗಳನ್ನು ಸೈನಿಕರಿಗೆ ಮತ್ತು ಸರ್ಕಾರಿ ಅಧಿಕಾರಿಗಳಿಗೆ ನೀಡಲಾಗಿತ್ತು. ಅದು ಈಗಲೂ ಮುಂದುವರೆದಿದ್ದು, ಈಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ(Karnataka election) ಇನ್ನೂ ಕೆಲವರಿಗೆ ಮತಗಟ್ಟೆಗೆ ಹೋಗದೆ ಓಟು ಹಾಕುವ ಅವಕಾಶ ಕಲ್ಪಿಸಿದೆ. ಈಗ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಚುನಾವಣಾ ಆಯೋಗದ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಈ ಬಗ್ಗೆ ಇಂದು (ಮಾರ್ಚ್ 29) ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಮೂಲಕ ಈ ಬಾರಿ ರಾಜ್ಯದಲ್ಲಿ ಅತಿ ಹಿರಿಯ ಮತದಾರರಿಗೆ ಅನುಕೂಲವಾಗುವಂತೆ ಆಯೋಗವು ಹೊಸ ಪ್ರಯೋಗ ಮಾಡುತ್ತಿದೆ. ಇದೇ ಮೊದಲ ಬಾರಿಗೆ ನಾವು ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ಅಂಗವಿಕಲರು ಮತ್ತು ಗಂಭೀರ ಅನಾರೋಗ್ಯ ಬಾಧಿತರು (ಪಿಡಬ್ಲ್ಯೂಡಿ) ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಒಟ್ಟಾರೆ Karnataka Election 2023 Schedule: *ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ: * 29th ಮಾರ್ಚ್ 2013
* ಮತದಾನ, ಮೇ 10 ಕ್ಕೆ
* ಫಲಿತಾಂಶ, ಮೇ 13 ಕ್ಕೆ
* ನಾಮಪತ್ರ ಸಲ್ಲಿಕೆ ಏಪ್ರಿಲ್ 13 ರಂದೇ ಆರಂಭವಾಗಲಿದೆ. * ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
* ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. * ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆ ದಿನವಾಗಿದೆ.

ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ.
ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಹಿರಿಯರು ಮತ್ತು. ವಿಕಲ ಚೇತನರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯವರು ತಿಳಿಸಿದ್ದಾರೆ.

ಮನೆಯಿಂದ ಮತದಾನ ಹೇಗೆ?
ಚುನಾವಣೆ ಆಯೋಗದ ವೆಬ್‌ಸೈಟ್, ವೋಟರ್ ಹೆಲ್ಸ್‌ಲೈನ್ ಅಥವಾ ಸಕ್ಷಮ್ ಆಯಪ್‌ನಲ್ಲಿ ಅಂತವರ ಹೆಸರು ನೋಂದಣಿ ಕಡ್ಡಾಯ ಇದೆ. ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗೆ ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುವುದು.

ಇದನ್ನೂ ಓದಿ: Election : ಈ ಸಲದ ಚುನಾವಣೆಗೆ ಬಳಸುವ EVM ಯಾವುದು ಗೊತ್ತಾ ? ಮಾಹಿತಿ ನೀಡಿದೆ ಆಯೋಗ

Leave A Reply

Your email address will not be published.