Election Date :ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ

Karnataka Vidhanasabha Election Date : ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

 

ಕೇಂದ್ರ ಚುನಾವಣಾ ಆಯೋಗ ಇಂದು (ಮಾ. 29) ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿಸಂಹಿತೆ ಜಾರಿಗೊಳ್ಳಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ದಿನಾಂಕದ ಜತೆಗೆ ನೀತಿಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ.

2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಈ ವಿಧಾನಸಭೆಯ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದೆ.

Leave A Reply

Your email address will not be published.