KPSC Recruitment 2023 : ಕೆಪಿಎಸ್ ಸಿಯಿಂದ ಶೀಘ್ರವೇ ಭರ್ಜರಿ ಸಿಹಿ ಸುದ್ದಿ! 831 ಹುದ್ದೆಗಳಿಗೆ ನೇಮಕ

KPSC Recruitment 2023: ಸರ್ಕಾರಿ ಉದ್ಯೋಗದ (government job) ನಿರೀಕ್ಷೆಯಲ್ಲಿರುವವರಿಗೆ ಕೆಪಿಎಸ್ ಸಿಯಿಂದ ಶೀಘ್ರವೇ ಭರ್ಜರಿ ಸಿಹಿ ಸುದ್ದಿ ಸಿಗಲಿದೆ. ಹೌದು, ಕರ್ನಾಟಕ ಲೋಕ ಸೇವಾ ಆಯೋಗವು (KPSC) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ .

 

ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಲದೆ, ಮಾ. 30 ರಿಂದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಇನ್ನು ಕರ್ನಾಟಕ ಲೋಕ ಸೇವಾ ಆಯೋಗವು (KPSC) ಖಾಲಿ ಇರುವ 831 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ (KPSC Recruitment 2023) ಎಂದು ತಿಳಿಸಿದೆ. ಅವುಗಳ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಯ ವಿವರ:
• ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್‌ ಎ) – 23 ಹುದ್ದೆ
• ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ – 40 ಹುದ್ದೆ
• ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್‌ ಎ)- 400 ಹುದ್ದೆ
• ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್‌ -ಬಿ) – 368 ಹುದ್ದೆ.

ಈ ಬಗ್ಗೆ ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದು, ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದೆ. ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಾಸಲಾಗುತ್ತದೆ ಎಂದು ಹೇಳಿದ್ದಾರೆ.

ನೇಮಕದ ಮಾಹಿತಿಗಾಗಿ ಈ ವೆಬ್‌ಸೈಟ್‌ https://kpsc.kar.nic.in ಗೆ ಭೇಟಿ ನೀಡಿ.

Leave A Reply

Your email address will not be published.