Home latest SBI Asha Scholarship 2023 : ‘ಎಸ್‌ಬಿಐ’ ಆಶಾ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! 50 ಸಾವಿರ...

SBI Asha Scholarship 2023 : ‘ಎಸ್‌ಬಿಐ’ ಆಶಾ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! 50 ಸಾವಿರ ವಿದ್ಯಾರ್ಥಿವೇತನ

SBI Asha Scholarship 2023

Hindu neighbor gifts plot of land

Hindu neighbour gifts land to Muslim journalist

SBI Asha Scholarship 2023 : ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಉದ್ದೇಶದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ನೀಡಲಾಗುವ ಆಶಾ ವಿದ್ಯಾರ್ಥಿವೇತನ 2023-24 ಕ್ಕೆ (SBI Asha Scholarship 2023) ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (State Bank of India) ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದ್ದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಎಸ್‌ಬಿಐ ಹಮ್ಮಿಕೊಂಡಿದ್ದು, ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 50,000 ವಿದ್ಯಾರ್ಥಿ ವೇತನ ನೀಡಲಾಗುವುದು.

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲನೇ ವರ್ಷದ ಪದವಿ ಓದುತ್ತಿರಬೇಕು.
ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು. ಅದಲ್ಲದೆ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :
> ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ.
> ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್)
> ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ.
> ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.
> ಆದಾಯ ಪ್ರಮಾಣ ಪತ್ರ (ಫಾರ್ಮ್ 16A/> ಆದಾಯ ಪ್ರಮಾಣಪತ್ರ/ ಪೇಸ್ಲಿಪ್).
> ವಿದ್ಯಾರ್ಥಿಗಳ ಇತ್ತೀಚಿನ ಫೋಟೋ ಸಲ್ಲಿಸಬೇಕು.

ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30, 2023 ಕೊನೆಯ ದಿನವಾಗಿದೆ.