Second Puc Students : ದ್ವಿತೀಯ PUC ವಿದ್ಯಾರ್ಥಿಗಳಿಗೊಂದು ವಿಶೇಷ ಮಾಹಿತಿ!

Second Puc Students: ಶಿಕ್ಷಣ(Education) ಪ್ರತಿಯೊಬ್ಬರ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪಿಯುಸಿ ಸ್ (Second PUC)ಮುಗಿಯುತ್ತಿದ್ದಂತೆ ಮುಂದೇನು ಎಂಬ ಪ್ರಶ್ನೆ ವಿದ್ಯಾರ್ಥಿಗಳಿಗೆ (Students)ಪೋಷಕರಿಗೆ(Parents) ಕಾಡುವುದು ಸಹಜ. ನೀಟ್, ಜೆಇಇ, ಸಿಇಟಿ ಬಗ್ಗೆ ಮಾಹಿತಿ ಮತ್ತು ಆಸಕ್ತಿ ಹೊಂದಿರುವ ದ್ವಿತೀಯ ಪಿಯುಸಿ ಈ ಕುರಿತು ತಯಾರಿಯಲ್ಲಿ ತೊಡಗುವುದು ಸಹಜ. ಇದೀಗ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ(Second Puc Students )ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ.

ಏಪ್ರಿಲ್ 3 ರಿಂದ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ (Second PUC Science Department Students) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಸಿ.ಇ.ಟಿ (CET)ನೀಟ್(NEET) ಹಾಗೂ ಜೆ.ಇ.ಇ(JEE Crash Course)ಕ್ರಾಶ್ ಕೋರ್ಸ್ ತರಬೇತಿಯು ಕೆಳಕಂಡ ಕಾಲೇಜುಗಳಲ್ಲಿ ಜರುಗಲಿದ್ದು, ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಕೋಟೇಶ್ವರ ಹಾಗೂ ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಪ್ರಾಂಶುಪಾಲೆ ಸುಶೀಲಾ ಕಾರ್ಯ ನಿರ್ವಹಿಸಲಿದ್ದಾರೆ. ಬೈಂದೂರು, ನಾವುಂದ, ಉಪ್ಪುಂದ ಹಾಗೂ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ ನಾಯಕ್ ಇರಲಿದ್ದಾರೆ. ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಇರಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಇರಲಿದ್ದಾರೆ.

ಬೆಳ್ಮಣ್ಣು ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಕಿಶೋರಿ ಬಿ, ಬಜಗೋಳಿ ಇರಲಿದ್ದಾರೆ. ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಜರುಗಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಬೇಬಿ ಶೆಟ್ಟಿ ಕಾರ್ಯ ನಿರ್ವಹಿಸಲಿದ್ದಾರೆ. ಸಾಣೂರು ಹಾಗೂ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲೆ ಅಖಿಲಾ ಜಿ ಹೆಬ್ಬಾರ್ ಕಾರ್ಯ ನಿರ್ವಹಿಸಲಿದ್ದಾರೆ. ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ಕಾಲೇಜಿನ ಪ್ರಾಂಶುಪಾಲ ರವೀಂದ್ರ ಉಪಾಧ್ಯ ಅವರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಹಾಲಾಡಿ ಹಾಗೂ ಬಿದ್ಕಲ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಿದ್ಕಲ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ವಿಘ್ನೇಶ್ವರ ಭಟ್ ಕಾರ್ಯ ನಿರ್ವಹಿಸಲಿದ್ದಾರೆ. ಶಂಕರನಾರಾಯಣ ಹಾಗೂ ಹೊಸಂಗಡಿ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೊಸಂಗಡಿ ಸ.ಪ.ಪೂ ಕಾಲೇಜಿನಲ್ಲಿ ತರಬೇತಿ ಇರಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಗೋಪಾಲ ಭಟ್ ಅವರನ್ನು ನೇಮಿಸಲಾಗಿದೆ. ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ತರಬೇತಿಗೆ ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರನ್ನು ನೇಮಿಸಲಾಗಿದ್ದು, ಹೆಬ್ರಿ, ಹಿರಿಯಡ್ಕ ಮತ್ತು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಭಟ್ ಅವರನ್ನು ನೇಮಿಸಲಾಗಿದೆ. ಮೇಲೆ ತಿಳಿಸಿದ ಮಾಹಿತಿ ಅನುಸಾರ ವಿದ್ಯಾರ್ಥಿಗಳು ಕೋರ್ಸ್ ಗಳ (Course)ಸದುಪಯೋಗ ಪಡಿಸಿಕೊಳ್ಳಬಹುದು.

ಇದನ್ನೂ ಓದಿ: UPSC Recruitment 2023 : ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಉದ್ಯೋಗವಕಾಶ : ಒಟ್ಟು ಹುದ್ದೆ-69, ಅರ್ಜಿ ಸಲ್ಲಿಸಲು ಕೊನೆ ದಿನ-ಏ.13

Leave A Reply

Your email address will not be published.