Karnataka Rain : ಮುಂದಿನ 48ಗಂಟೆಗಳಲ್ಲಿ ಭಾರೀ ಮಳೆ ಸಂಭವ! ಗುಡುಗು ಸಹಿತ ಮಳೆ ಈ ರಾಜ್ಯಗಳಲ್ಲಿ ಹೆಚ್ಚು!
Karnataka Rain : ಇತ್ತೀಚೆಗೆ ಬೇಸಿಗೆಯ ಕಾವು ಜೋರಾಗಿದ್ದು, ಸೆಖೆಯ ಝಳದಿಂದ ಪಾರಾಗಲು ಜನರು ನಾನಾ ತಂತ್ರಜ್ಞಾನಗಳ ಮೊರೆ ಹೋಗುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ಗುಡುಗು ಸಿಡಿಲು ವರುಣ ದರ್ಶನ ಕೊಡುವ ಲಕ್ಷಣಗಳು ಗೋಚರಿಸಿವೆ. ಈ ನಡುವೆ, ಹವಾಮಾನ ಇಲಾಖೆ(India Meteorological Department)(IMD)ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ(Heavy Rain) ಸಂಭವದ ಕುರಿತು ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಇಲ್ಲವೇ ರಾತ್ರಿ ಗುಡುಗು ಸಹಿತ(light to moderate rainfall accompanied by thunderstorms, lightning) ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ವರುಣ ಅಬ್ಬರಿಸುವ (Karnataka Rain)ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಹೆಚ್ಚಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ (Tamil Nadu) 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆಯಾವುದರಿಂದ ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನಕಾಲ ವರುಣ (Rain) ಅಬ್ಬರಿಸಲಿದ್ದು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ 2 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಂಭವಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಕನಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ.