Transport Employees: ಕರ್ನಾಟಕ ಸಾರಿಗೆ ನೌಕರರಿಗೆ ರಾಮ ನವಮಿಯಂದೇ ಸಿಹಿ ಸುದ್ದಿ!

Transport Employees: ಕರ್ನಾಟಕ ಸಾರಿಗೆ ನೌಕರರಿಗೆ (Transport Employees) ರಾಮ ನವಮಿಯಂದೇ ಭರ್ಜರಿ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.

ಸಾರಿಗೆ ನೌಕರರು ಮೂಲ ವೇತನದಲ್ಲಿ ಶೇ.25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡುತ್ತಾ ಬಂದಿದ್ದು, ಮಾ.21ರಿಂದ ಮುಷ್ಕರಕ್ಕೆ ಕರೆ ಕೂಡ ನೀಡಿದ್ದರು. ಆದರೆ, ಸರ್ಕಾರ ಮಾರ್ಚ್​ 28ರಂದು ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೆಚ್ಚಿಸಲಾಗಿದೆ.

ಸರಕಾರಿ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka government) ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ (Transport Employees Salary Hiked) ಹೆಚ್ಚಿಸಲಾಗಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು(ಮಾರ್ಚ್ 30) ಆದೇಶ ಹೊರಡಿಸಿದೆ. ನಾಲ್ಕೂ ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಲಾಗಿದೆ.

ಇತ್ತೀಚೆಗಷ್ಟೆ ಸಾರಿಗೆ ನೌಕರರು ಬಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಮುಂದಾಗಿದ್ದು, ಸಾರಿಗೆ ಸಚಿವ (Minister of Transport of Karnataka)ಬಿ. ಶ್ರೀರಾಮುಲು(B. Sriramulu) ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ನಾಲ್ಕೂ ನಿಗಮಗಳ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿ ಸಾರಿಗೆ ನೌಕರರ ಮನವೊಲಿಕೆಗೆ ಪ್ರಯತ್ನಿಸಿ ವಿಫಲಾಗಿ ಕೊನೆಗೆ ಸಿಎಂ ಬಸವರಾಜ ಬೊಮ್ಮಾಯಿ( Basavaraj Bommai)ಅವರು ಶೇ 15ರಷ್ಟು ಹೆಚ್ಚಿಸುವುದಾಗಿ ಹೇಳಿ ಸಾರಿಗೆ ನೌಕರರ ಮನವೊಲಿಸಿದ್ದು, ಅದರಂತೇ ಸದ್ಯ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Leave A Reply

Your email address will not be published.