JDS MLA DC Gourishankar disqualified: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ನನ್ನು ಅನರ್ಹಗೊಸಿ ಹೈಕೋರ್ಟ್ ಆದೇಶ!

DC Gourishankar : ತುಮಕೂರು ಗ್ರಾಮಾಂತರ ಜೆಡಿಎಸ್(JDS) ಶಾಸಕ ಗೌರಿಶಂಕರ್ (DC Gourishankar) ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ (JDS) ಶಾಸಕ ಡಿ.ಸಿ ಗೌರಿಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ತುಮಕೂರು (Tumakuru) ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ವಿರುದ್ಧ ನಕಲಿ ಬಾಂಡ್ ಹಂಚಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸದ್ಯ ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್‍ನ ಏಕಪೀಠ ಸದಸ್ಯತ್ವ ಈ ತೀರ್ಪನ್ನು ಹೊರಡಿಸಿದೆ.

2018ರ ಚುನಾವಣೆಯಲ್ಲಿ ನಕಲಿ ಬಾಂಡ್ ಆಮಿಷ ಒಡ್ಡಿ ಅಕ್ರಮವಾಗಿ ಗೆದ್ದಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ನೀಡಿದ್ದ ದೂರು ನೀಡಿದ್ದರು. ಗೌರಿಶಂಕರ್ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಸುರೇಶ್ ಗೌಡರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸುದೀರ್ಘ 5 ವರ್ಷಗಳ ಕಾಲ ವಿಚಾರಣೆ ನಡೆಸಿರುವ ಹೈಕೋರ್ಟ್ ಇಂದು ತೀರ್ಪು ನೀಡಿದೆ.

ಅಂದಹಾಗೆ ಈ ಹಿಂದೆಯೇ ಡಿ.ಸಿ.ಗೌರಿಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೋರ್ಟ್‌ನಲ್ಲಿ ಮುಕ್ತಾಯವಾಗಿತ್ತು. ತೀರ್ಪಿಗಾಗಿ ಜನ ಕಾದಿದ್ದರು. ಗೌರಿಶಂಕರ್ ಪರವಾಗಿ ತೀರ್ಪು ಬಂದರೆ ಸ್ಪರ್ಧೆಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಆದರೀಗ ಲೆಕ್ಕಾಚಾರ ತಲೆಕೆಳಗಾಗಿದೆ.

ಒಂದು ವೇಳೆ ತಕ್ಷಣಕ್ಕೆ ಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದರೆ ಸ್ಪರ್ಧಿಸಲು ಅವಕಾಶ ಸಿಗಬಹುದು. ಆದರೆ ಈ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ವಾಪಸ್ ಬಂದಿರುವುದರಿಂದ ತಕ್ಷಣಕ್ಕೆ ತಡೆಯಾಜ್ಞೆ ಸಿಗುವುದು ಕಷ್ಟಕರ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ.

Leave A Reply

Your email address will not be published.