Assembly Election 2023: ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತರ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ!

Assembly – Election 2023 : ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ಕೊರೋನಾ ರೋಗಿಗಳ ಸಂಖ್ಯೆ ಮತ್ತೆ ಹೆಚ್ಚಾಗಿದ್ದು, ಇದೀಗ ದೇಶಾದ್ಯಂತ ಕೊರೊನಾ ಸೋಂಕು ಮತ್ತೊಮ್ಮೆ ವೇಗ ಪಡೆದುಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ಆದ್ದರಿಂದ ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಹೀಗಾಗಿ ವೈರಸ್ ವಿರುದ್ಧ ರಕ್ಷಣೆ ಪಡೆಯೋದು ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ, ಚುನಾವಣಾ ನೀತಿ (Assembly – Election 2023) ಸಂಹಿತೆ ಜಾರಿ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ.

ಮುಖ್ಯವಾಗಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ (Election) ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಅದಲ್ಲದೆ ಚುನಾವಣಾ ಪಥ ಸಂಚಲನ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.

ಇನ್ನು ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಇನ್ನು ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ

ನಿಯಮ ಪ್ರಕಾರ, ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ (covid ) ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಲಾಗಿದೆ .

ಮುಖ್ಯವಾಗಿ ಮತದಾನ ಮಾಡುವವರೂ ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿ ಮತದಾನ ಮಾಡಬೇಕು. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ .

Leave A Reply

Your email address will not be published.