CSK vs GT, IPL 2023: ಪಂದ್ಯ ಆರಂಭಕ್ಕೂ ಮುನ್ನ ಗುಜರಾತ್ ತಂಡದಿಂದ ಸ್ಟಾರ್ ಬ್ಯಾಟ್ಸ್ಮನ್ ಔಟ್!
CSK vs GT, IPL 2023: ಇಂಡಿಯನ್ ಪ್ರೀಮಿಯರ್ ಲೀಗ್ 2023 (CSK vs GT, IPL 2023) ಮಾರ್ಚ್ 31 ರಂದು (ಇಂದು) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (narendra Modi stadium) ನಡೆಯಲಿದ್ದು, ಪಂದ್ಯ ಆರಂಭಕ್ಕೆ ಇನ್ನೂ ಕೆಲವೇ ಕ್ಷಣಗಳು ಬಾಕಿ ಇವೆ. ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ಮುಖಾಮುಖಿಯಾಗಲಿವೆ.
ಗುಜರಾತ್ ಟೈಟಾನ್ಸ್ (GT) ತಂಡದಲ್ಲಿ, ಶುಭಮನ್ ಗಿಲ್, ವೃದ್ದಿಮಾನ್ ಸಹಾ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶಿವಂ ಮಾವಿ, ಅಲ್ಝಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್ ಆಟಗಾರರಿರುತ್ತಾರೆ. ಹಾಗೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದಲ್ಲಿ ಋತುರಾಜ್ ಗಾಯಕ್ವಾಡ್, ಬೆನ್ ಸ್ಟೋಕ್ಸ್, ಮೊಯೀನ್ ಅಲಿ, ಶಿವಂ ದುಬೆ, ಅಂಬಾಟಿ ರಾಯುಡು, ಎಂ.ಎಸ್ ಧೋನಿ (ನಾಯಕ), ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ಸಿಮ್ರಾನ್‌ಜೀತ್ ಸಿಂಗ್, ಮಹೇಶ್ ತೀಕ್ಷಣ ಇರುತ್ತಾರೆ.
ಮೊದಲ ಪಂದ್ಯವು ಮಹೇಂದ್ರ ಸಿಂಗ್ ಧೋನಿ (Mahendra Singh dhoni) ಮತ್ತು ಹಾರ್ದಿಕ್ ಪಾಂಡ್ಯ (hardik pandya) ನಡುವೆ ನಡೆಯಲಿದೆ. ಎರಡೂ ತಂಡಗಳು ಬಲಿಷ್ಠವಾಗಿಯೇ ಇವೆ. ಆದರೆ ಬೌಲಿಂಗ್‌ನಲ್ಲಿ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್‌ಗಿಂತ ಉತ್ತಮವಾಗಿ ಕಾಣುತ್ತದೆ. ಕಳೆದ ಋತುವಿನಲ್ಲಿ ಈ ಎರಡು ತಂಡಗಳ ನಡುವೆ ಎರಡು ಪಂದ್ಯಗಳು ನಡೆದಿತ್ತು. ಅದರಲ್ಲಿ ಗುಜರಾತ್ ಟೈಟಾನ್ಸ್ ತಂಡ ಎರಡನ್ನೂ ಗೆದ್ದಿತ್ತು.
ಆದರೆ, ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಪರ ಫಿನಿಶರ್ ಪಾತ್ರದಲ್ಲಿ ಮಿಲ್ಲರ್ ಅದ್ಭುತ ಪ್ರದರ್ಶನ ನೀಡಿದ್ದ ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ (David Miller) CSK vs GT ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎನ್ನಲಾಗಿದೆ.
ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್‌ನೊಂದಿಗೆ ಏಕದಿನ ಸರಣಿಯನ್ನು ಆಡುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿ ಏಪ್ರಿಲ್ 2 ರಂದು ಪೂರ್ಣಗೊಳ್ಳಲಿದೆ. ದಕ್ಷಿಣ ಆಫ್ರಿಕಾದ ಆಟಗಾರರು ಐಪಿಎಲ್‌ನ ಆರಂಭಿಕ ಪಂದ್ಯಕ್ಕೆ ಹಾಜರಾಗುತ್ತಿಲ್ಲ. ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಂ (ಸನ್ ರೈಸರ್ಸ್), ಹೆನ್ರಿಚ್ ಕ್ಲಾಸೆನ್ (ಸನ್ ರೈಸರ್ಸ್), ಮಾರ್ಕೊ ಜಾನ್ಸೆನ್ (ಸನ್ ರೈಸರ್ಸ್), ಕ್ವಿಂಟನ್ ಡಿ ಕಾಕ್ (ಲಖನೌ), ರಬಾಡ (ಪಂಜಾಬ್), ನೋಕಿಯಾ (ದೆಹಲಿ) ತಮ್ಮ ಫ್ರಾಂಚೈಸಿಗಳು ಆಡಿದ ಮೊದಲ ಪಂದ್ಯಗಳಿಗೆ ಹಾಜರಾಗುತ್ತಿಲ್ಲ. ಸದ್ಯ ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ಸ್ ನಡುವಿನ ಎರಡನೇ ಏಕದಿನ ಪಂದ್ಯ ಶುಕ್ರವಾರ, ಮೂರನೇ ಏಕದಿನ ಪಂದ್ಯ ಭಾನುವಾರ ನಡೆಯಲಿದೆ.