Lalit Modi: ರಾಹುಲ್ ಗಾಂಧಿ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲೇರಲು ಮುಂದಾದ ಮೋದಿ, ಕಾರಣವೇನು?

Lalit Modi : ಮೋದಿ ಸರ್‌ನೇಮ್ ಕುರಿತಾದ ವಿವಾದಾತ್ಮಕ ಹೇಳಿಕೆಯಿಂದ ಶಿಕ್ಷೆಗೆ ಗುರಿಯಾಗಿ, ಸಂಸತ್ತಿನಿಂದ(Parliment) ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ(Lalit Modi) ಕಿಡಿ ಕಾರಿದ್ದು, ರಾಹುಲ್ ವಿರುದ್ಧ ಬ್ರಿಟನ್‌(Britan) ನಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ಹಾಕುವುದಾಗಿ ಹೇಳಿದ್ದಾರೆ.

 

ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಮುಖ್ಯಸ್ಥ ಲಲಿತ್ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಬ್ರಿಟನ್‌ನಲ್ಲಿರುವ ಲಲಿತ್ ಮೋದಿ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ತಮ್ಮ ಹೆಸರು ಪ್ರಸ್ತಾಪಿಸಿರುವ ಕಾರಣಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಅಲ್ಲಿನ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ 2019 ರ ಲೋಕಸಭೆ ಚುನಾವಣೆ(Parliment Election) ವೇಳೆ ಕರ್ನಾಟಕದ(Karnataka) ಕೋಲಾರ(Kolara) ದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮ ಏಕೆ ಇರುತ್ತದೆ’ ಎಂದು ಪ್ರಶ್ನಿಸಿದರು. ಈ ಹೇಳಿಕೆಯ ಮೂಲಕ ರಾಹುಲ್ ಅವರು ‘ಮೋದಿ’ ಉಪನಾಮ ಹೊಂದಿರುವವರನ್ನ ಹಿಯಾಳಿಸಿದ್ದಾರೆ ಎಂದು ಆರೋಪಿಸಿ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಸಂಸತ್ತಿನಿಂದಲೂ ಅನರ್ಹಗೊಳಿಸಿತ್ತು. ಇದಾದ ಕೆಲ ದಿನಗಳ ಬಳಿಕ ಲಲಿತ್ ಮೋದಿ ಈ ಹೇಳಿಕೆ ನೀಡಿದ್ದಾರೆ.

ಐಪಿಎಲ್‌ನಲ್ಲಿ ಹಣಕಾಸು ಅಕ್ರಮಗಳನ್ನು ಎಸಗಿದ ಆರೋಪಕ್ಕೆ ಗುರಿಯಾಗಿದ್ದ ಲಲಿತ್ ಮೋದಿ, 2010ರಲ್ಲಿ ಲಂಡನ್‌ಗೆ ಪರಾರಿಯಾಗಿ ಅಲ್ಲಿಯೇ ವಾಸವಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಲಲಿತ್ ಮೋದಿ, ರಾಹುಲ್ ಗಾಂಧಿ ಮತ್ತು ಸಹಚರರು, ನಾನು ಯಾವುದೇ ಅಪರಾಧ ಎಸಗದೆ ಇರುವಾಗ ತಮ್ಮನ್ನು ನ್ಯಾಯದಿಂದ ತಪ್ಪಿಸಿಕೊಂಡವ ಎಂದು ಯಾವ ಆಧಾರದಲ್ಲಿ ಕರೆದಿದ್ದಾರೆ ಎಂದು ಲಲಿತ್ ಮೋದಿ ಪ್ರಶ್ನಿಸಿದ್ದಾರೆ. ತಾವು ಯಾವುದೇ ಅಪರಾಧಕ್ಕಾಗಿ ಶಿಕ್ಷೆಗೆ ಸಹ ಗುರಿಯಾಗಿಲ್ಲ. ತಪ್ಪಿಸಿಕೊಂಡು ಹೋಗಿರುವ ದೇಶಭ್ರಷ್ಟ ಎಂದು ಹೇಳುತ್ತಿರುವುದು ಹೇಗೆ? ಏಕೆ? ಅಲ್ಲದೆ ಅವರು ತಮ್ಮನ್ನು ತಾವು ಶತ ಮೂರ್ಖರನ್ನಾಗಿ ಮಾಡಿಕೊಳ್ಳುವುದನ್ನು ನೋಡಲು ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಹಲವು ನಾಯಕರಿಗೆ ಟ್ಯಾಗ್ ಮಾಡಿರುವ ಅವರು, ಎಲ್ಲರೂ ವಿದೇಶಗಳಲ್ಲಿ ಆಸ್ತಿ ಆರೋಪ ಮಾಡಿದ್ದಾರೆ. ಅವರ ವಿಳಾಸ ಮತ್ತು ಚಿತ್ರಗಳನ್ನು ನಾನು ಕಳುಹಿಸುತ್ತೇನೆ. ನಿಜವಾದ ಕಳ್ಳರು ದೇಶದ ಜನರನ್ನು ಮೂರ್ಖ ಧರಿಸುವುದು ಬೇಡ’ ಎಂದು ಅವರು ಹೇಳಿದ್ದಾರೆ. 100 ಬಿಲಿಯನ್ ಡಾಲರ್‌ನಷ್ಟು ಆದಾಯ ಸೃಷ್ಟಿಸಿರುವ ಈ ಜಗತ್ತಿನ ಅತ್ಯಂತ ಅದ್ದೂರಿ ಕ್ರೀಡಾ ಕಾರ್ಯಕ್ರಮವನ್ನು ತಾವು ಸೃಷ್ಟಿ ಮಾಡಿದ್ದಾಗಿ ಹೇಳಿರುವ ಲಲಿತ್, ರಾಹುಲ್ ಗಾಂಧಿ ಕುಟುಂಬ ದೇಶಕ್ಕಾಗಿ ಮಾಡಿರುವುದಕ್ಕಿಂತಲೂ ಹೆಚ್ಚಿನದ್ದನ್ನು ತಮ್ಮ ಕುಟುಂಬಕ್ಕಾಗಿ ಮಾಡಿಕೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ರಾಹುಲ್ ಗಾಂಧಿ ಅವರು ತಮ್ಮ ಆರೋಪವನ್ನು ಸಾಬೀತುಪಡಿಸಲಿ ಎಂದು ಲಲಿತ್ ಸವಾಲು ಹಾಕಿದ್ದಾರೆ.

Leave A Reply

Your email address will not be published.