SSLC Annual Exam 2023: SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಈ ವರ್ಷ ನಿಮಗೆ ಸಿಗಲಿದೆ ಗ್ರೇಸ್ ಮಾರ್ಕ್ಸ್ !!

SSLC Annual Exam: 2022-23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯು (SSLC Annual Exam ) ಈಗಾಗಲೇ ಆರಂಭವಾಗಿದ್ದು, ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ. ಸದ್ಯ ಇದೀಗ ವಿದ್ಯಾರ್ಥಿಗಳಿಗೆ
ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದೆ.

2022-23ನೇ ಸಾಲಿನ ಎಸ್ ಎಸ್ ಎಲ್ ಸಿ (SSLC ) ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ಕೂಡ ಕೊರೊನಾ (COVID) ಬ್ಯಾಚ್ ಎಂದು ಪರಿಗಣಿಸಿ 26 ಗ್ರೇಸ್ ಅಂಕ ನೀಡಲಿದೆ ಎನ್ನಲಾಗಿದೆ.

ಈ ಬಗ್ಗೆ ಎಸ್‌ಎಸ್ ಎಲ್ ಸಿ ಬೊರ್ಡ್ ನಿರ್ದೇಶಕ ರಾಮಚಂದ್ರ ಅವರು ಮಾಹಿತಿ ನೀಡಿದ್ದು, ಈ ಬಾರಿಯೂ ಕೊರೊನಾ ಬ್ಯಾಚ್ ಆಗಿದ್ದು, ಈ ಕಾರಣದಿಂದ ಶೇ.10 ರಷ್ಟು ಗ್ರೇಸ್ ಅಂಕ ನೀಡಲಾಗುವುದು. ಆದರೆ, ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ನೀಡಲಾಗುತ್ತದೆ. ಅಲ್ಲದೆ, ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಇರುವ 6 ವಿಷಯಗಳಲ್ಲಿ 3 ವಿಷಯಗಳಲ್ಲಿ ಮಾತ್ರ ಉತ್ತೀರ್ಣರಾಗಿದ್ದರೆ, ಆಗ ಉಳಿದ 3 ವಿಷಯಗಳಿಗೆ ತಲಾ ಶೇ. 10ರಷ್ಟು ಆದರೆ ಒಟ್ಟು 26 ಗ್ರೇಸ್ ಅಂಕ ಸಿಗುತ್ತದೆ. ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಗರಿಷ್ಠ 10 ಅಂಕ ಮತ್ತು ಉಳಿದ ವಿಷಯಗಳಲ್ಲಿ ಗರಿಷ್ಠ 8 ಅಂಕವನ್ನು ಕೃಪಾಂಕದ ರೂಪದಲ್ಲಿ ಪಡೆಯಬಹುದಾಗಿದೆ.

Leave A Reply

Your email address will not be published.