UIDAI Recruitment 2023: ಬಿಇ/ಬಿ.ಟೆಕ್ ಪದವೀಧರರಿಗೆ ಬಂಪರ್ ಉದ್ಯೋಗಾವಕಾಶ !
UIDAI Recruitment 2023: ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಸಿಹಿ ಸುದ್ಧಿ ಇಲ್ಲಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು, ಅನೇಕ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಹುದ್ದೆಯ ವಿವರ, ಖಾಲಿ ಹುದ್ದೆಗಳು,ವೇತನ ಮೊದಲಾದ ಮಾಹಿತಿ ತಿಳಿದಿರುವುದು ಅವಶ್ಯಕ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI Recruitment 2023) ಖಾಲಿ ಇರುವ ಹುದ್ದೆಗೆ ಮೇ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date) ವಾಗಿದ್ದು, ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು.
ಹುದ್ದೆಯ ಮಾಹಿತಿ
ಸಂಸ್ಥೆ – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಹುದ್ದೆ – ಅಸಿಸ್ಟೆಂಟ್ ಡೈರೆಕ್ಟರ್ ಜನರಲ್
ಉದ್ಯೋಗದ ಸ್ಥಳ – ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ – ಮೇ 15, 2023
ಪ್ರಮುಖ ದಿನಾಂಕಗಳು:
ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 29.03.2023 ಆರಂಭ ದಿನವಾಗಿದ್ದು,ಮೇ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಬಾಂಗ್ಲಾ ಸಾಹಿಬ್ ರಸ್ತೆ
ಕಾಳಿ ಮಂದಿರದ ಹಿಂದೆ
ಗೋಲ್ ಮಾರುಕಟ್ಟೆ
ನವದೆಹಲಿ-110001
ವಿದ್ಯಾರ್ಹತೆ( Education Qualification)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಅನುಸಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ ಮುಗಿಸಿರಬೇಕು.
ವಯೋಮಿತಿ(Age Limit)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಅನುಸಾರ, ಅಭ್ಯರ್ಥಿಗಳ ವಯೋಮಿತಿ ಮೇ 15, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ(Selection Procedures)
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (Written Exam)ಮತ್ತು ಸಂದರ್ಶನ(Interview) ಮೂಲಕ ಆಯ್ಕೆ ಮಾಡಲಾಗುತ್ತದೆ.ಈ ಹುದ್ದೆಗೆ ವೇತನದ ಮಾಹಿತಿ ಸದ್ಯ ಬಹಿರಂಗಪಡಿಸಿಲ್ಲ. ಆಸಕ್ತ ಅಭ್ಯರ್ಥಿಗಳು, ಮೇ 15, 2023 ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.