KM Shivalinge gowda : ಚುನಾವಣೆ ಹೊತ್ತಲ್ಲಿ ಜೆಡಿಎಸ್‌ ಗೆ ಬಿಗ್ ಶಾಕ್ : ಅರಸೀಕೆರೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ರಾಜೀನಾಮೆ

KM Shivalinge gowda : ಅರಸೀಕೆರೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ (KM Shivalinge gowda)ಜೆಡಿಎಸ್‌ ಪಕ್ಷದಿಂದ ದೂರ ಸರಿದಿದ್ದು, ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂಬ ಚರ್ಚೆ ಗ್ರಾಸವಾಗುತ್ತಿದೆ.

ಇಂದು ಬೆಳಗ್ಗೆ ವಿಧಾನ ಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಸ್ವೀಕರ್‌ ಕಾಗೇರಿ ಅವರ ಶಿರಸಿಯ ಕಚೇರಿಗೆ ತೆರಳಿ ಅರಸೀಕೆರೆ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಜೀನಾಮೆ ನೀಡುವುದಕ್ಕೂ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ತೆರಳಿದರು. ಈ ಹಿಂದೆ ಜನರ ಪರವಾಗಿ ಮಾತನಾಡಿ ಶಾಸಕ ಶಿವಲಿಂಗೇಗೌಡ ಮಾತುಗಳನ್ನು ಮಾತನಾಡುವ ಮೂಲಕ ಶ್ಲಾಘಿಸಿದ್ದಾರೆ.

2008ರಲ್ಲಿ ಮೊದಲ ಬಾರಿ ಶಾಸನಸಭೆಗೆ ಆಯ್ಕೆಯಾಗಿದ್ದ ಅವರು 2018ರ ಚುನಾವಣೆಯಲ್ಲಿ ಅರಸಿಕೆರೆ ವಿಧಾನಸಭೆ ಕ್ಷೇತ್ರದಲ್ಲಿ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಪಕ್ಷದಲ್ಲಿ ನಿರೀಕ್ಷಿತ ಮನ್ನಣೆ, ಸ್ಥಾನಮಾನ ಸಿಗದ ಕಾರಣ ಅವರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದರು.

ಅಷ್ಟೆ ಅಲ್ಲದೇ ಶಿವಮೊಗ್ಗ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾದ ಶಿವಲಿಂಗೇಗೌಡ ಇವತ್ತೇ ಕಾಂಗ್ರೆಸ್ ಸೇರಬೇಕು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಸೇರಲು ಆಗುತ್ತಿಲ್ಲ. ತಾಂತ್ರಿಕ ತೊಡಕು ನಿವಾರಣೆಯಾದ ನಂತರ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ. ಕಾಂಗ್ರೆಸ್ ಸೇರಲು ನಾನು ಸಿದ್ದನಿದ್ದೇನೆ ಎಂದು ಶಾಸಕ ಶಿವಲಿಂಗೇಗೌಡ ಘೋಷಣೆ ಮಾಡಿದ್ದರು.

Leave A Reply

Your email address will not be published.