Second puc result 2023: ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ವಿಳಂಬ ಸಾಧ್ಯತೆ ; ಸಂಪೂರ್ಣ ಮಾಹಿತಿ ಇಲ್ಲಿದೆ
Second puc evaluation : ರಾಜ್ಯದಲ್ಲಿ ಈಗಾಗಲೇ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (second puc annual exam) ಮುಕ್ತಾಯವಾಗಿದೆ. ಪರೀಕ್ಷೆಯು ಮಾರ್ಚ್ 09,2023 ರಿಂದ ಆರಂಭವಾಗಿದ್ದು ಮಾರ್ಚ್ 29,2023ಕ್ಕೆ ಕೊನೆಗೊಂಡಿದೆ. ಸದ್ಯ ದ್ವಿತೀಯ ಪಿಯು ಮೌಲ್ಯಮಾಪನದ (Second puc evaluation) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.
ಪಿಯು ವಾರ್ಷಿಕ ಪರೀಕ್ಷೆ ಈಗಾಗಲೇ ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಈ ಬಾರಿಯ ಫಲಿತಾಂಶ ಸ್ವಲ್ಪ ವಿಳಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರತಿಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರಿಕ್ಷೆಯ ಮೌಲ್ಯಮಾಪನವು 20 ದಿನಗಳಲ್ಲಿ ಪೂರ್ಣಗೊಳ್ಳುತ್ತಿತ್ತು. ಆದರೆ, ಈ ಬಾರಿ ಚುನಾವಣೆ (election) ಕಾರ್ಯಗಳಿಗೆ ಪಿಯು ಉಪನ್ಯಾಸಕರನ್ನು ನಿಯೋಜನೆ ಮಾಡಿರುವ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನವು ಕನಿಷ್ಠ ಒಂದು ತಿಂಗಳು ಸಮಯ ಹಿಡಿಯುತ್ತದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (ಕೆಎಸ್‌ಇಎಬಿ) ದ್ವಿತೀಯ ಪಿಯು ಮೌಲ್ಯಮಾಪನ ಪ್ರಕ್ರಿಯೆಯನ್ನು ಏಪ್ರಿಲ್ 5 ರಿಂದ ಆರಂಭಿಸಲು ತಿಳಿಸಿದೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 23 ಸಾವಿರ ಮೌಲ್ಯಮಾಪಕರು ಭಾಗವಹಿಸಬೇಕಿತ್ತು. ಆದರೆ, ಇದರಲ್ಲಿ ಶೇಕಡ 30 ರಷ್ಟು ಸಿಬ್ಬಂದಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ. ಸದ್ಯ ಇದಕ್ಕೆ ಪರಿಹಾರವಾಗಿ ಮಂಡಳಿಯ ಖಾಸಗಿ ಉಪನ್ಯಾಸಕರನ್ನು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಎಸ್‌ಎಸ್‌ಎಲ್‌ಸಿ (SSLC) ಮೌಲ್ಯಮಾಪನಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಲಾಗಿದೆ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ (Second puc result date) ಯಾವಾಗ?
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (second puc annual exam) ಮುಕ್ತಾಯವಾಗಿದ್ದು,
ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ. ಈ ಹಿಂದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ (b c nagesh) ಮಾಹಿತಿ ನೀಡಿದ್ದು, ಪರೀಕ್ಷೆಯ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಬಿಡುಗಡೆಯಾಗುವುದು ಎಂದು ಹೇಳಿದ್ದಾರೆ. ನಿರ್ದಿಷ್ಟ ದಿನಾಂಕ ತಿಳಿಸಿಲ್ಲ. ಆದರೆ ಮೌಲ್ಯಮಾಪನ ಕಾರ್ಯ ವಿಳಂಭವಾದರೆ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಕಡಿಮೆ ಇದೆ. ಫಲಿತಾಂಶವನ್ನು ಚುನಾವಣೆ ಮುಗಿದ ಬಳಿಕ, ಅಂದರೆ ಮೇ ಮೂರನೇ ವಾರ ಅಥವಾ ಅಂತ್ಯದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.