BHEL Recruitment 2023 : BHEL ನಲ್ಲಿ ಉದ್ಯೋಗವಕಾಶ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಮಾಸಿಕ 43 ಸಾವಿರ ಸಂಬಳ!

BHEL Recruitment 2023: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ (Bharat Heavy Electronics Limited)​​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ (BHEL Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು – ಪ್ರಾಜೆಕ್ಟ್​ ಸೂಪರ್​ವೈಸರ್
ಒಟ್ಟು ಹುದ್ದೆ – 10

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29- 4-2023
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
6 -5-2023

ವಿದ್ಯಾರ್ಹತೆ : ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್​ನಲ್ಲಿ ಡಿಪ್ಲೊಮಾ
ಮಾಸಿಕ ವೇತನ : ₹ 43,550
ಉದ್ಯೋಗದ ಸ್ಥಳ : ಬೆಂಗಳೂರು
ವಯೋಮಿತಿ: ಗರಿಷ್ಠ 32 ವರ್ಷ

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (SC/ST) ಅಭ್ಯರ್ಥಿಗಳು: 15 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
PwBD [OBC (NCL)] ಅಭ್ಯರ್ಥಿಗಳು: 13 ವರ್ಷಗಳು

ಅರ್ಜಿ ಶುಲ್ಕ: ಅರ್ಜಿ ಶುಲ್ಕ ಆನ್‌ಲೈನ್ ಮೂಲಕ ಪಾವತಿಸಬೇಕಿದ್ದು,
SC/ST/PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಸಾಮಾನ್ಯ/OBC ಮತ್ತು EWS ಅಭ್ಯರ್ಥಿಗಳು ರೂ.200/- ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಆಫ್​ಲೈನ್ ಅರ್ಜಿ ಸಲ್ಲಿಕೆ: ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:
AGM (HR)
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಎಲೆಕ್ಟ್ರಾನಿಕ್ಸ್ ವಿಭಾಗ
P. B. No. 2606
ಮೈಸೂರು ರಸ್ತೆ
ಬೆಂಗಳೂರು-560026

ಹೆಚ್ಚಿನ ಮಾಹಿತಿಗಾಗಿ ವೆಬ್​ಸೈಟ್​​ www.bhel.com ಗೆ ಭೇಟಿ ನೀಡಿ.

Leave A Reply

Your email address will not be published.