KPSC Recruitment : ಕೆಪಿಎಸ್ ಸಿಯಿಂದ 47 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

KPSC Recruitment 2023: ಉದ್ಯೋಗದ ಹುಡುಕಾಟದಲ್ಲಿರುವ ವರಿಗೆ ಸುವರ್ಣವಕಾಶ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗವು (Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (KPSC Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

 

ಸಂಸ್ಥೆ – ಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಯ ಹೆಸರು- ಸಹಕಾರ ಸಂಘಗಳ ನಿರೀಕ್ಷಕರು
ಒಟ್ಟು ಹುದ್ದೆ- 47

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 30/03/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/4/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 2/5/ 2023

ವಿದ್ಯಾರ್ಹತೆ- ಪದವಿ
ಮಾಸಿಕ ವೇತನ – ₹ 27,650-52,650
ಉದ್ಯೋಗದ ಸ್ಥಳ -ಕರ್ನಾಟಕ
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ:
2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಇರಲಿದೆ. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಆಗಿದೆ. ಇನ್ನು SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Leave A Reply

Your email address will not be published.