Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೆ ಮಳೆ !!

Karnataka Rain : ಇತ್ತೀಚೆಗೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಹೊರಗೆ ಕಾಲಿಟ್ಟರೆ ಸುಡು ಸುಡು ಎನ್ನುವಷ್ಟು ಬಿಸಿಲಿನ ತಾಪ ತಟ್ಟುತ್ತಿದೆ. ಸದ್ಯ ಸೆಖೆಯ ಝಳದಿಂದ ಪಾರಾಗಲು ಜನರು ನಾನಾ ತಂತ್ರಜ್ಞಾನಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಎಲ್ಲವೂ ತಾತ್ಕಾಲಿಕ, ಮಳೆ (rain) ಬಂದರೆ ಮಾತ್ರ ಪೂರ್ತಿ ಬಿಸಿಲಿನ ಬೇಗೆ ತಗ್ಗುತ್ತದೆ. ಇದೀಗ ಈ ಬಿಸಿಲಿನ ತಾಪದಿಂದ ಮುಕ್ತಿಪಡೆಯಲು ಮಳೆ ಬರಲಿದೆ.

 

ಹೌದು, ಕರ್ನಾಟಕದ ಹಲವೆಡೆ ಏಪ್ರಿಲ್ 5 ರವರೆಗೆ ಮಳೆ (Karnataka Rain) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಹಾಗೆಯೇ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಈ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರಿನ ಎಚ್​ಎಎಲ್​ನಲ್ಲಿ 24.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2. ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೇ ಕಲಬುರಗಿಯಲ್ಲಿ 38.3 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಭಾರತದ ಹವಾಮಾನ ಇಲಾಖೆ (IMD) ಪ್ರಕಾರ, ದೆಹಲಿಯಲ್ಲಿ ಇಂದು ಕನಿಷ್ಠ ತಾಪಮಾನ 15.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಋತುವಿನ ಸರಾಸರಿಗಿಂತ ಮೂರು ಡಿಗ್ರಿ ಕಡಿಮೆಯಾಗಿದೆ.

ದೆಹಲಿಯ (Delhi) ವಾಯು ಗುಣಮಟ್ಟ ಸೂಚ್ಯಂಕವು (AQI) ಸುಮಾರು 8 ಗಂಟೆಗೆ ‘ತೃಪ್ತಿದಾಯಕ’ (77) ವಿಭಾಗದಲ್ಲಿ ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ತಿಳಿಸಿದೆ. ಶೂನ್ಯ ಮತ್ತು 50 ರ ನಡುವಿನ AQI ಅನ್ನು ಉತ್ತಮ, 51 ಮತ್ತು 100 ತೃಪ್ತಿದಾಯಕ, 101 ಮತ್ತು 200 ಮಧ್ಯಮ, 201 ಮತ್ತು 300 ಕಳಪೆ, 301 ಮತ್ತು 400 ಅತ್ಯಂತ ಕಳಪೆ ಮತ್ತು 401 ಮತ್ತು 500 ತೀವ್ರ ಎನ್ನಲಾಗುತ್ತದೆ.

Leave A Reply

Your email address will not be published.