KFCSC Recruitment 2023: 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!
KFCSC Recruitment 2023 : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿಮಿಟೆಡ್ (KFCSC) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆ (KFCSC Recruitment 2023)ಹೊರಡಿಸಿದೆ. 386 ಜೂನಿಯರ್ ಅಸಿಸ್ಟೆಂಟ್ (Junior Assistant), ಸೀನಿಯರ್ ಅಸಿಸ್ಟೆಂಟ್ (Senior Assistant) ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಖಾಲಿಯಿರುವ ಹುದ್ದೆ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ ಮೊದಲಾದ ವಿವರ ತಿಳಿದಿರುವುದು ಒಳ್ಳೆಯದು. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
KFCSC ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್
ಹುದ್ದೆಗಳ ಸಂಖ್ಯೆ: 386
ಉದ್ಯೋಗ ಸ್ಥಳ: ಕರ್ನಾಟಕ
KFCSC ಹುದ್ದೆಯ ವಿವರಗಳು
ಸಹಾಯಕ ವ್ಯವಸ್ಥಾಪಕ- 10
ಹಿರಿಯ ಸಹಾಯಕರು- 57
ಹಿರಿಯ ಸಹಾಯಕರು (ಖಾತೆಗಳು)- 33
ಕ್ವಾಲಿಟಿ ಇನ್ಸ್ಪೆಕ್ಟರ್- 23
ಕಿರಿಯ ಸಹಾಯಕರು- 263
ವೇತನ: ರೂ.11600-43200/- ಪ್ರತಿ ತಿಂಗಳು
ಪ್ರಮುಖ ದಿನಾಂಕಗಳು:
ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ (Online)ಅರ್ಜಿ ಸಲ್ಲಿಸಲು 17-04-2023 ಆರಂಭಿಕ ದಿನವಾಗಿದೆ.17-05-2023 ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು(Last Date), ಆಸಕ್ತರು ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ. ಇ -ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು 20-05-2023 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
KFCSC ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿಕೊಂಡು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಹೊಂದಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.ಆನ್ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಈ ಮೊದಲು ಎಲ್ಲಾದರೂ ಕಾರ್ಯ ನಿರ್ವಹಿಸಿದ್ದರೆ ಅನುಭವದ ವಿವರ ಕೂಡ ಸೇರಿಸಬೇಕು. KFCSC ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಒದಗಿಸಬೇಕು.ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. KFCSC ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಅಂತಿಮವಾಗಿ ಕ್ಲಿಕ್ ಮಾಡಬೇಕು.
KFCSC ನೇಮಕಾತಿ 2023 ಅರ್ಹತಾ ವಿವರಗಳು
KFCSC ನಿಯಮಗಳ ಅನುಸಾರ, ನೇಮಕಾತಿಗೆ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪರಿಗಣಿಸಲಾಗುತ್ತದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಇರಲಿದೆ. ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KFCSC ಸಂಬಳದ ವಿವರಗಳು
ಸಹಾಯಕ ವ್ಯವಸ್ಥಾಪಕರು- ರೂ.22800-43200/-
ಹಿರಿಯ ಸಹಾಯಕರು- ರೂ.14550-26700/-
ಹಿರಿಯ ಸಹಾಯಕರು (ಖಾತೆಗಳು)- ರೂ.14550-26700/-
ಗುಣಮಟ್ಟದ ಇನ್ಸ್ಪೆಕ್ಟರ್- ರೂ.14550-26700/-
ಕಿರಿಯ ಸಹಾಯಕರು- ರೂ.11600-21000/-
ಆಸಕ್ತ ಅಭ್ಯರ್ಥಿಗಳು ಮೇಲೆ ತಿಳಿಸಿದ ಹುದ್ದೆಗೆ 17-05-2023 ಕೊನೆಯ ದಿನದ ಮೊದಲೇ ಅರ್ಜಿ ಸಲ್ಲಿಸುವುದು ಉತ್ತಮ.
KFCSC ಅಧಿಸೂಚನೆಯ ಪ್ರಮುಖ ಲಿಂಕ್ ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್ : ಇಲ್ಲಿ ಕ್ಲಿಕಿಸಿ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್: kfcsc.karnataka.gov.in ಭೇಟಿ ನೀಡಬಹುದು