Puttur : ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ ಆ ಫೋಟೋ : ಠಾಣೆಗೆ ದೂರು
Puttur : ಪುತ್ತೂರು : ಮಹಿಳೆಯೊಬ್ಬರೊಂದಿಗೆ ಜನ ಪ್ರತಿನಿಧಿಯೊಬ್ಬರು ಜತೆಗಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಕುರಿತು ಸಂತ್ರಸ್ತ ಮಹಿಳೆಯು ನ್ಯಾಯ ಯಾಚಿಸಿ ಉಪ್ಪಿನಂಗಡಿ (puttur – Uppinangadi) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೆಕ್ಕಿಲಾಡಿ ಸಮೀಪದ ಸಂತ್ರಸ್ತ ಮಹಿಳೆ ಎ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಪೋಟೊ ಅಸಲಿ/ ಎಡಿಟೆಡ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸ್ ತನಿಖೆ ನಡೆಯಲಿದೆ.
ವಿಧಾನ ಸಭಾ ಚುನಾವಣೆಯ ಹೊಸ್ತಿಲಲ್ಲಿ ಫೋಟೊಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.