Rain Alert : ಇಂದಿನಿಂದ 5 ಜಿಲ್ಲೆಗಳಲ್ಲಿ ಭಾರೀ ವರುಣಾರ್ಭಟ

Rain Alert : ಬೆಂಗಳೂರು ಹವಾಮಾನ ಕೇಂದ್ರ ತುರ್ತು ಪ್ರಕಟಣೆಯ ಪ್ರಕಾರ ಇಂದಿನಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮಧ್ಯರಾತ್ರಿಯೇ ಪ್ರಕಟಣೆ ಹೊರಡಿಸಿದೆ. ಸದ್ಯ ಐದು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದಿರುವಂತೆ (Rain Alert) ಸಂದೇಶ ಸಹ ರವಾನಿಸಲಾಗಿದೆ.

ಬೆಂಗಳೂರು ಹವಾಮಾನ ಕೇಂದ್ರ ಬುಧವಾರ ರಾತ್ರಿ ಈ ಪ್ರಕಟನೆಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿಗಳು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಈಗಾಗಲೇ ಬೆಂಗಳೂರು ದಕ್ಷಿಣ ಭಾಗದ ಆರ್​ಆರ್ ನಗರ, ಮೈಸೂರು ರಸ್ತೆ, ಕೆಂಗೇರಿ, ವಿದ್ಯಾಪೀಠ, ವಿಜಯನಗರ, ಅತ್ತಿಗುಪ್ಪೆ ಭಾಗದಲ್ಲಿ ಮಳೆಯಾಗಿದೆ. ಕೆಆರ್​ ಪುರ ಭಾಗದಲ್ಲಿಯೂ ಮಳೆಯಾಗಿದೆ. ಇನ್ನು ದೇವನಹಳ್ಳಿಯಲ್ಲಿ ಏಕಾಏಕಿ ಸುರಿದ ಮಳೆಯಿಂದ ದೇವನಹಳ್ಳಿ ಮತ್ತು ಬೂದಿಗೆರೆ ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಟ ನಡೆಸಿದರು ಎಂಬ ಮಾಹಿತಿ ದೊರೆತಿದೆ.

ಸದ್ಯ ಏಕಯೇಕಿ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಕೋಲಾರ, ಮಂಡ್ಯ, ಮಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಅದಲ್ಲದೆ ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅದಲ್ಲದೆ ಈ ಭಾಗದಲ್ಲಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದೆ. ಮಾರುತುಗಳು ರಾಜ್ಯದ ಗಡಿ ದಾಟಿ ಹೋದ ನಂತರ ಮಳೆಯಾಗುವ ಸಾಧ್ಯೆತೆಗಳಿವೆ. ಆದರೂ ಜಿಲ್ಲಾಡಳಿತಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಅದಲ್ಲದೆ ತಗ್ಗು ಹಾಗೂ ನದಿ ತೀರದ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದಿರಬೇಕು. ಐದು ಜಿಲ್ಲೆಗಳ ಪ್ರವಾಸಕ್ಕೆ ಹೊರಟಿರುವ ಪ್ರವಾಸಿಗರು ತಮ್ಮ ಯೋಜನೆಯನ್ನು ಒಂದೆರಡು ದಿನಗಳ ಮಟ್ಟಿಗೆ ಮುಂದೂಡಿಕೆ ಮಾಡುವುದು ಸೂಕ್ತ ಎಂದು ತಿಳಿಸಲಾಗಿದೆ.

 

ಇದನ್ನು ಓದಿ : zodiac sign : ಈ ರಾಶಿಯವರಿಗೆ ಇನ್ನು ಮುಂದೆ ಫುಲ್​ ಲಕ್​! ಯಾರ ಕಣ್ಣು ಬೀಳೋದಿಲ್ಲ ಬಿಡಿ 

Leave A Reply

Your email address will not be published.