Home Karnataka State Politics Updates Narega scheme : ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ : ತೋಟಗಾರಿಕೆ ಇಲಾಖೆಯಿಂದ ಅರ್ಹ...

Narega scheme : ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ : ತೋಟಗಾರಿಕೆ ಇಲಾಖೆಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸೌಲಭ್ಯ!

Narega scheme 2023

Hindu neighbor gifts plot of land

Hindu neighbour gifts land to Muslim journalist

Narega scheme 2023 : ರೈತರಿಗೆ ನೆರವಾಗುವ ದೃಷ್ಟಿಯಿಂದ ಸರಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿದ್ದು, ಬೆಳೆ ಹಾನಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದೆ. ಅದರಂತೆ ಇದೀಗ ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ನರೇಗಾ (Narega scheme 2023) ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸುತ್ತಿದೆ.

ಸಿರುಗುಪ್ಪ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ, ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು.

ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ 2023-24 ನೇ ಸಾಲಿಗೆ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ಅಳವಡಿಸಲು ಇಲಾಖಾ ಮಾರ್ಗಸೂಚಿ ಪ್ರಕಾರ ಇತರೆ ವರ್ಗದ ರೈತರಿಗೆ ಶೇ.75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು. ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿಗಳನ್ನು ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲಾಗುವ ವ್ಯವಸ್ಥೆ ಇದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣಕ್ಕಾಗಿ ಅರ್ಹ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.

 

ಇದನ್ನು ಓದಿ : Breasts worship: ದೇವರಿಲ್ಲದ ಈ ದೇವಾಲಯದಲ್ಲಿ ನಡೆಯುತ್ತೆ ಮಹಿಳೆಯರ ‘ಮೊಲೆ’ ಯ ಪೂಜೆ!