7th Pay Commission News: ಏಳನೇ ವೇತನ ಆಯೋಗ ಪೊಲೀಸರಿಗೆ ತಾತ್ಕಾಲಿಕ ಪರಿಹಾರ ಮಂಜೂರು ಮಾಡಿದ ರಾಜ್ಯ ಸರಕಾರ!

7th Pay Commission ಪೊಲೀಸರಿಗೆ ತಾತ್ಕಾಲಿಕ(7th Pay Commission) ಪರಿಹಾರ ಮಂಜೂರು ಮಾಡಿ ಎಂದು ರಾಜ್ಯ ಸರ್ಕಾರ ಆದೇಶವನ್ನು ನೀಡಿದೆ.

ಜನರ ಹಿತ ದೃಷ್ಟಿಯಿಂದ ರಾಜ್ಯ ಸರ್ಕಾರ (state government) ಜನರ ಬೇಡಿಕೆಯನ್ನು ಪರಿಶೀಲಿಸಿ ಒಂದಲ್ಲ ಒಂದು ರೀತಿಯ ಹೊಸ ಆದೇಶವನ್ನು ಹೊರಡಿಸುತ್ತಿದೆ. ಇದೀಗ ರಾಜ್ಯ ಸರ್ಕಾರ ಇನ್ನೊಂದು ಹೊಸ ರೀತಿಯ ಆದೇಶವನ್ನು ಹೊರಡಿಸಿದೆ. ಅದೇನಪ್ಪಾ ಅಂದ್ರೆ

 

ಏಳನೇ ವೇತನ ಆಯೋಗದಂತೆ ಪೊಲೀಸರಿಗೆ (police) ತಾತ್ಕಾಲಿಕ ಪರಿಹಾರ ಮಂಜೂರು ಮಾಡಿ ಎಂಬ ಕಾನೂನನ್ನು ತಂದಿದೆ. ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ರಾಜ್ಯ ಸರ್ಕಾರಿ ನೌಕರರು (government workers) ನೀಡಿದ ಬೇಡಿಕೆಗಳ ದೃಷ್ಟಿ ಇಂದ ಕೇಂದ್ರ ಸರ್ಕಾರ ಪಾಲಿಸಿಕೊಂಡು ಬಂದಂತಹ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ (education workers) ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ನೌಕರರಿಗೆ ಈ ಪರಿಹಾರವನ್ನು ಏಪ್ರಿಲ್ 1, 2023 ರಿಂದ ಜಾರಿಗೆ ಬರುವಂತೆ ಮಾಡಿದೆ. ಮೂಲ ವೇತನವನ್ನು ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರ (state government) ನೀಡಿದ ಮಾಹಿತಿಯ ಪ್ರಕಾರ 2018ರ ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ. ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ಸರ್ಕಾರ(government) ಹೇಳಿದೆ.

ರಾಜ್ಯ ಸರ್ಕಾರದ (state government)ನಿವೃತ್ತಿ ವೇತನದಾರರು ಯಾರಾದರೂ ಇದ್ದರೆ ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ಆಗಿ ವೇತನ ಪಡೆಯುವವರು ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ವ್ಯಕ್ತಿಗಳಿಗೆ ಹಾಗೆಯೇ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಅದೇ ದಿನಾಂಕದಂದು ಅಂದರೆ ಏಪ್ರಿಲ್ 1ನೇ ತಾರೀಕು ಈ ಪರಿಹಾರ ಜಾರಿಗೆ ಬರುವಂತೆ ಮಾಡಿದೆ.

ಅದೇ ರೀತಿ ಮೂಲ ನಿವೃತ್ತಿ ವೇತನ ಹಾಗೂ ಕುಟುಂಬ ನಿವೃತ್ತಿ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸಹ ಸರ್ಕಾರವು (government)ಹೊಸ ರೀತಿಯ ಕಾಯ್ದೆಯನ್ನು ನಿಗದಿಪಡಿಸಿದೆ. ಸರ್ಕಾರದ ಸ್ಥಳೀಯ ಸಂಸ್ಥೆಗಳ ನೌಕರರಿಗೆ ಅಂದರೆ ಸರ್ಕಾರದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಹಾಗೂ ಸರ್ಕಾರದಿಂದ ಮಕ್ಕಳ ವಿದ್ಯಾಭ್ಯಾಸ ಗೋಸ್ಕರ ಸಹಾಯಧನ ಪಡೆಯುತ್ತಿರುವ ಶಿಕ್ಷಣ (education) ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಕೂಡ ಈ ಆದೇಶವು ಅನ್ವಯಿಸುತ್ತದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ಈ ಮಾಹಿತಿಯನ್ನು ಎಲ್ಲರಿಗೂ ತಿಳಿಸಿದೆ.

Leave A Reply

Your email address will not be published.