Home Karnataka State Politics Updates Prime Minister Narendra Modi : ಮೈಸೂರಿಗೆ ಪ್ರಧಾನಿ ಮೋದಿ ಆಗಮನ : ವಾಹನ ಸವಾರರೇ.....

Prime Minister Narendra Modi : ಮೈಸೂರಿಗೆ ಪ್ರಧಾನಿ ಮೋದಿ ಆಗಮನ : ವಾಹನ ಸವಾರರೇ.. ಈ ಸಂಚಾರ ಮಾರ್ಗ ಬದಲಾವಣೆ

P.M. Modi's arrival in Mysore

Hindu neighbor gifts plot of land

Hindu neighbour gifts land to Muslim journalist

PM Modi’s arrival in Mysore : ನಾಳೆಯಿಂದ 3 ದಿನಗಳ ಕಾಲ ಮೈಸೂರಿನಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ  ಚಾಲನೆ ನೀಡುವ ನಿಟ್ಟಿನಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ ಓದಿ.

ಪ್ರಧಾನಿ ನರೇಂದ್ರ ಮೋದಿ ಆಗಮನ (PM Modi’s arrival in Mysore) ನೀಡುವ ನಿಟ್ಟಿನಲ್ಲಿ ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 03 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಂಜನಗೂಡು ರಿಂಗ್ ರಸ್ತೆ ಜಂಕ್ಷನ್‌ನಿಂದ ಎಲೆತೋಟ ಜಂಕ್ಷನ್, ರಾಜಹಂಸ ಜಂಕ್ಷನ್ ಗನ್ ಹೌಸ್ ಜಂಕ್ಷನ್‌ವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಂಜನಗೂಡು ರಸ್ತೆ ಮೂಲಕ ಸಂಚರಿಸುವ ವಾಹನಗಳು ಕಡಕೊಳ ದಡದಹಳ್ಳಿ ರಮಾಬಾಯಿನಗರ ಶ್ರೀರಾಂಪುರ ರಿಂಗ್ ರಸ್ತೆ ಮೂಲಕ ಅವಕಾಶ ಮಾಡಿಕೊಡಲಾಗಿದ್ದು, ಟಿ.ನರಸೀಪುರ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬಲ ತಿರುವು ಪಡೆದು ವಾಯುವಿಹಾರ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಏಪ್ರಿಲ್ 9ರ ಬೆಳಗ್ಗೆ 3 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ರಾಜಹಂಸ ಜಂಕ್ಷನ್‌ನಿಂದ ಮಹಾರಾಣಾ ಪ್ರತಾಪಸಿಂಹ ವೃತ್ತದವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಬೆಳಗ್ಗೆ 06 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹುಣಸೂರು ರಸ್ತೆ ಅಟಲ್ ಬಿಹಾರಿ ವಾಜಪೇಯಿ ವೃತ್ತದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ರಾಮಸ್ವಾಮಿ ವೃತ್ತದವರೆಗೆ, ಕೆ.ಆರ್.ಬಿ ರಸ್ತೆ ಡಿ.ಸಿ ಕಛೇರಿ ಆರ್ಚ್ ಗೇಟ್ ಜಂಕ್ಷನ್ ನಿಂದ ಏಕಲವ್ಯ ವೃತ್ತದವರೆಗೆ ಹಾಗೂ ರಾಧಾಕೃಷ್ಣ ಮಾರ್ಗ ಕೌಟಿಲ್ಯ ವೃತ್ತದಿಂದ ಮುಡಾ ಜಂಕ್ಷನ್‌ವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನ ವಾಹನ ಸವಾರರ ಅನುಕೂಲಕ್ಕಾಗಿ ಈ ಪರ್ಯಾಯ ಮಾರ್ಗವನ್ನು ಅನುಸರಿಸುವುದು ಉತ್ತಮ, ಇಲ್ಲವಾದಲ್ಲಿ ನಗರದಲ್ಲಿ ಓಡಾಟಕ್ಕೆ ಬಹಳ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಆ ನಿಟ್ಟಿನಲ್ಲಿ ಸವಾರರೇ ಈ ಪರ್ಯಾಯ ಮಾರ್ಗವನ್ನು ಅನುಸರಿಸುವುದು ಮುಖ್ಯವಾಗಿದೆ.

 

ಇದನ್ನು ಓದಿ :  Triplets Babies: ತ್ರಿವಳಿ ಮಕ್ಕಳು ಜನಿಸಲು ಕಾರಣವೇನು? ಅಧ್ಯಯನ ಏನು ಹೇಳುತ್ತೆ?